

ಹುಬ್ಬಳ್ಳಿ: ದೇಶ ಮುನ್ನಡೆಯಲು ಎಲ್ಲ ಸಮುದಾಯದವರ ಆಶೀರ್ವಾದ ಬೇಕು, ಭಾರತ ಗೆಲ್ಲಲು ನರೇಂದ್ರ ಮೋದಿ ಅವರು ಹ್ಯಾಟ್ರಿಕ್ ಸಾಧನೆ ಮಾಡಬೇಕು, ಇದಕ್ಕಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಪರಿಶಿಷ್ಟ ಸಮುದಾಯ ಬೆಂಬಲ ನೀಡಬೇಕು ಎಂದು ಮಾಜಿ ಸಚಿವ, ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ. ಶ್ರೀರಾಮುಲು ಮನವಿ ಮಾಡಿದರು.
ಇಲ್ಲಿಯ ಗೋಕುಲ ಗಾರ್ಡನ್ ನಲ್ಲಿ ಶನಿವಾರ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ್ದ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಪರಿಶಿಷ್ಟ ಪಂಗಡದವರಿಗಾಗಿ ಮೀಸಲಾತಿ ಹೆಚ್ಚಳ ಮಾಡಿದೆ. ಹಲವು ಸವಲತ್ತುಗಳನ್ನು ನೀಡಿದೆ. ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತಿದ್ದರೂ ವಾಲ್ಮಿಕಿ ಸಮುದಾಯದ ನಾಯಕ ರಾಜಕೀಯದಿಂದ ಮರೆಯಾಗಬಾರದು ಎನ್ನುವ ಕಾರಣಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮತ್ತೆ ಲೋಕಸಭೆಗೆ ಸ್ಪಧಿರ್ಸಲು ಹುರಿದುಂಬಿಸಿದರು. ಟಿಕೆಟ್ ಘೋಷಣೆಯಾಗುವಲ್ಲಿಯೂ ಪ್ರಮುಖ ಪಾತ್ರ ವಹಿಸಿದರು. ನನಗೆ ರಾಜಕೀಯ ಪುನರ್ಜನ್ಮ ನೀಡಿದರು ಎಂದರು.
ಹುಬ್ಬಳ್ಳಿ ಧಾರವಾಡವನ್ನು ಬಹಳ ಸುಂದರವಾಗಿ ಅಭಿವೃದ್ಧಿ ಮಾಡುವಲ್ಲಿ ಜೋಶಿ ಅವರು ಶ್ರಮಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯ, ಎಲ್ಲ ಸಮುದಾಯದವರ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಾಗಿ ಎಲ್ಲರೂ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಹಿತ ಕಾಯದ ಕಾಂಗ್ರೆಸ್:
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಕೇವಲ ವೋಟ್ಬ್ಯಾಂಕ್ ಸಲುವಾಗಿ ಕಾಂಗ್ರೆಸ್ನವರು ಸಮುದಾಯಗಳನ್ನು ಬಳಸಿಕೊಂಡಿದ್ದಾರೆಯೇ ಹೊರತು, ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ ಎಂದರು.
ವಾಲ್ಮಿಕಿ ಸಮಾಜವು ಬಿಜೆಪಿಗೆ ಸಾಕಷ್ಟು ಬೆಂಬಲ ನೀಡುತ್ತ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಮಾಜಕ್ಕೆ ಆಭಾರಿಯಾಗಿದ್ದಾರೆ. ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮಿಕಿ ಹೆಸರು ನಾಮಕರಣ ಮಾಡಲಾಗಿದೆ. ಪರಿಶಿಷ್ಟ ಪಂಗಡದವರ ಬಡತನ ನೀಗಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಭಾರತದಲ್ಲಿ ಜಾತಿ ನೋಡಿ ಯಾರೂ ಗೌರವ ಕೊಡುವುದಿಲ್ಲ. ಬದಲಾಗಿ ವ್ಯಕ್ತಿಯ ಗುಣ ನೋಡಿ ಗೌರವ ನೀಡುತ್ತಾರೆ ಎಂಬುದನ್ನು ವಾಲ್ಮಿಕಿಯವರು ರಾಮಾಯಣದ ಮೂಲಕ ತಿಳಿಸಿಕೊಟ್ಟಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದವರೇ ನಮ್ಮ ಶಕ್ತಿ ಎಂದು ಹೇಳಿಕೊಳ್ಳುವ ಕಾಂಗ್ರೆಸ್ನವರು ಪ್ರಧಾನ ಮಂತ್ರಿ ಅಭ್ಯಥಿರ್ ಎಂದು ಖರ್ಗೆಯವರನ್ನು ಹೆಸರಿಸಿದಾಗ ಮಮತಾ ಬ್ಯಾನಜಿರ್ ಸೇರಿ ಅನೇಕರು ವಿರೋಧಿಸಿದರು. ರಾಹುಲ್ ಗಾಂಧಿ ಅವರಿಗೆ ತಾನು ಏನು ಮಾತನಾಡುತ್ತಿದ್ದೇನೆ ಎಂಬುದೇ ಗೊತ್ತಾಗುವುದಿಲ್ಲ ಎಂದು ಟೀಕಿಸಿದರು.
ಇದುವರೆಗೂ ಕಾಂಗ್ರೆಸ್ನವರು ಮತಕ್ಕಾಗಿ ಬಳಸಿಕೊಳ್ಳುತ್ತಿದ್ದ ದೇಶದ ದೀನ ದಲಿತರು, ಶೋಷಿತರು, ದಮನಿತರ ಶ್ರೇಯೋಭಿವೃದ್ಧಿಯೇ ಮೋದಿ ಗ್ಯಾರಂಟಿ ಎಂದು ಜೋಶಿ ಘೋಷಿಸಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಕಾಂಗ್ರೆಸ್ನವರು ಇದುವರೆಗೂ ಕೇವಲ ಬಾಯಿ ಮಾತಿನಲ್ಲಿಯೇ ಹಿಂದುಳಿದವರು, ಶೋಷಿತರ ಅಭಿವೃದ್ಧಿ ಮಾಡುತ್ತ ಬಂದಿದ್ದಾರೆ. ಆದರೆ, ಬಿಜೆಪಿ ಹೇಳಿದಂತೆ ನಡೆದುಕೊಂಡಿದೆ. ದುಡಿದು ತಿನ್ನುವ ಸಮುದಾಯದವರಿಗಾಗಿ ಅನುಕೂಲಕರ ಹಲವು ಯೋಜನೆ ರೂಪಿಸಿದೆ. ಧಾರವಾಡದಲ್ಲಿ 1.5 ಎಕರೆ ಜಾಗದಲ್ಲಿ ಭವ್ಯ ವಾಲ್ಮಿಕಿ ಭವನ ನಿಮಿರ್ಸಲಾಗುತ್ತಿದೆ. ಹೀಗೆ ಅನೇಕ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡಲಾಗಿದೆ ಎಂದರು.
ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಹನಮಂತ ಬಂಗಾರು ಪ್ರಾಸ್ತಾವಿಕ ಮಾತನಾಡಿದರು.
ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಪ್ರದಿಪ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕರಾದ ನಾಗರಾಜ ಛಬ್ಬಿ, ಸೀಮಾ ಮಸೂತಿ, ಮೇಯರ್ ವೀಣಾ ಬರದ್ವಾಡ, ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಪ್ರಧಾನ ಕಾರ್ಯದಶಿರ್ ದತ್ತಮೂತಿರ್ ಕುಲಕಣಿರ್,
ರಾಜ್ಯ ಎಸ್ಟಿ ಮೋರ್ಚಾ ಕೋಶಾಧ್ಯಕ್ಷ ಮಣಿಕಂಠ ಶ್ಯಾಗೋಟಿ, ಮಾಜಿ ಮೇಯರ್ ಮಂಜುಳಾ ಅಕ್ಕೂರ, ಮಹಾನಗರ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಪುಂಡಲೀಕ ತಳವಾರ, ಅಶೋಕ ವಾಲ್ಮಿಕಿ, ಗ್ರಾಮಾಂತರ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಮ್ಯಾಗಿನಮನಿ, ರವಿ ಬೆಂತೂರ, ಲಿಂಗರಾಜ ಪಾಟೀಲ, ಇತರರು ಇದ್ದರು.