

ವಿಜಯಪುರ: 1974ರ ವಕ್ಫ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ.
ಸಚಿವ ಜಮೀರ್‌ಅಹ್ಮದ್ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸಿ ಪಹಣಿಯಲ್ಲಿ ವಕ್ಫ್ ಹೆಸರು ಸೇರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದರು.
ಈಗಾಗಲೇ ವಿಜಯಪುರ ಅಲ್ಲದೇ ರಾಜ್ಯಾದ್ಯಂತ ಅನೇಕ ರೈತ ಕುಟುಂಬಗಳು ಮಠ ಮಾನ್ಯಗಳ ಆಸ್ತಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದನ್ನು ಕಂಡು ರೈತ ಸಮೂಹ ಆತಂಕಕ್ಕೀಡಾಗಿತ್ತು. ತದನಂತ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿದ ನೋಟಿಸ್ ವಾಪಸ್ ಹಿಂಪಡೆಯಲು ತಿಳಿಸಿದಾಗಲೂ ದಾಖಲೆಯಲ್ಲಿ ವಕ್ಫ್ ಹೆಸರು ಇತ್ತು. ಆದ್ದರಿಂದ 1974ರ ವಕ್ಫ್ ಆಸ್ತಿ ಸಂಪೂರ್ಣ ರದ್ದು ಆಗುವರೆಗೂ ಈ ಹೋರಾಟ ನಿಲ್ಲಿಸುವುದಿಲ್ಲ ಎಂದು ಆರ್.ಎಸ್. ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.