ನಾನು ಗೆದ್ದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಬದಲು: ಈಶ್ವರಪ್ಪ

Eshwarappa K.S.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ನಾನು ಶಿವಮೊಗ್ಗದಲ್ಲಿ ಗೆದ್ದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಒಂದು ಕುಟುಂಬದ ಕೈಯಲ್ಲಿ ಬಿಜೆಪಿ ಸಿಲುಕಿದೆ. ಸರ್ವಾಧಿಕಾರಿ ಧೋರಣೆ ಇದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಪ್ರಯತ್ನ ನಡೆಯುತ್ತಿದೆ. ನಾನೂ ಆ ದಿಕ್ಕಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ನಗರದಿಂದ ಸ್ಪರ್ಧೆ ಮಾಡಿದ್ದರೆ ನೂರಕ್ಕೆ ನೂರು ಗೆಲ್ಲುತ್ತಿದ್ದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಂದು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿದ್ದೇನೆ. ನಾನು ಗೆದ್ದ ನಂತರ ಬಿಜೆಪಿ ಸೇರುತ್ತೇನೆ. ಈಗಾಗಲೇ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿಯ ಆಶೀರ್ವಾದ, ಸ್ವಾಮೀಜಿಗಳು ಒಳಗೊಂಡಂತೆ ಎಲ್ಲರ ಬೆಂಬಲ ಸಿಕ್ಕಿದೆ. ನೂರಕ್ಕೆ ನೂರು ಗೆಲ್ಲುವುದಾಗಿ ಸ್ವಾಮೀಜಿಗಳೂ ಹೇಳಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net