ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

BJP Strike
Published on

ಕಾರವಾರ: ಕಾಂಗ್ರೆಸ್ ಮುಖಂಡರು ರಾಜ್ಯಪಾಲರ ವಿರುದ್ಧ ಅಸಾಂವಿಧಾನಿಕ ಪದ ಬಳಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಪ್ರಮುಖರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೆರಿ ಎದುರು ಸೇರಿದ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ ಹಾಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಜಿಲ್ಲಾಧಿಕಾರಿ ಕೆ.ಲ್ಷ್ಮೀಪ್ರಿಯಾ ಅವರ ಮೂಲಕ ಸಲ್ಲಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಸಂತೋಷ್ ನಾಯ್ಕ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ನೇರವಾಗಿ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ನಾನೇನೂ ತಪು÷್ಪ ಮಾಡಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯ, ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು.
ಸಿಎಂ ಅವರ ಪತ್ನಿ ಹೆಸರಲ್ಲಿ ಮುಡಾ ಸೈಟ್ ಪಡೆದ ದಾಖಲೆಗಳಿದ್ದರೂ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ರಕ್ಷಣೆ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಹಗರಣ ನಡೆಸಿದ ಕುರಿತು ಬಿಜೆಪಿ ದಾಖಲೆ ಬಿಡುಗಡೆ ಮಾಡಿದರೂ ಸಿದ್ದರಾಮಯ್ಯ ತಮ್ಮ ಖುರ್ಚಿ ಬಿಡುತ್ತಿಲ್ಲ. ಬದಲಾಗಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರನ್ನೆ ದೋಷಿ ಎಂದು ಮಾಡಲು ಕಾಂಗ್ರೆಸ್ ಹೊರಟಿದೆ. ಗೌರವಾನ್ವಿನ ತಾಜ್ಯಪಾಲರ ಹುದ್ದೆಗೆ ಅವಮರ್ಯಾದೆ ತೋರುವುದು, ಒಂದು ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವ ವಿಚಾರವಲ್ಲ. ಇದು ಪ್ರಜಾಪ್ರಭುತ್ವಕ್ಕೆ ಆತಂಕದ ವಿಷಯವಾಗಿದೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಅನುದಾನ ಎಲ್ಲಿ ಹೋಯಿತು ಎಂಬುದನ್ನು ಸಿಎಂ ತಿಳಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಭ್ರಷ್ಟಾಚಾರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ಗಂಭೀರ ವಿಚಾರವಾಗಿದೆ. ಸ್ವಲ್ಪವಾದರೂ ನೈತಿಕತೆ ಎಂಬುದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಖುರ್ಚಿಯಿಂದ ಇಳಿಯಬೇಕು ಎಂದು ಆಗ್ರಹಿಸಿದರು. ವಿಚಾರಣೆಯನ್ನು ಎದುರಿಸಬೇಕು.
ಎಂಎಲ್‌ಸಿ ಗಣಪತಿ ಉಳ್ವೆಕರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ, ಪ್ರಶಾಂತ ನಾಯ್ಕ, ಶಿವಾಜಿ ನರ್ಸಾನಿ, ಜಿಲ್ಲಾ ಮಹಿಳಾ ಮೋರ್ಚಾದ ಶಿವಾನಿ ಶಾಂತಾರಾಮ್,ಜಿಲ್ಲಾ ಓಬಿಸಿ ಮೋರ್ಚಾದ ರಾಜೇಂದ್ರ ನಾಯ್ಕ, ಮಾತನಾಡಿದರು. ಜಿಲ್ಲಾ ಯುವ ಮೋರ್ಚಾ ಪ್ರೇಮ ಕುಮಾರ್ ಇದ್ದರು.

ಇದನ್ನೂ ಓದಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net