ಪ್ರಭಾವಿಗಳಿಂದ ಆರೋಪಿಗಳ ರಕ್ಷಣೆ: ಜಿಲ್ಲಾ ಬಿಜೆಪಿ ಆರೋಪ

BJP submits appeal to ASP Mandya
Published on

ಮಂಡ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಮೇಲೆ ಸಾಮೂಹಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ.ಗಂಗಾಧರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಎಂಟು ವರ್ಷದ ಬಾಲಕಿ ಮೇಲೆ ಮೂವರು ಗ್ಯಾಂಗ್‌ರೇಪ್ ಮಾಡಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೆಲಸವಾಗಿದೆ. ಬಾಲಕಿಗೆ ಕೇಕ್ ಕೊಡಿಸಿ, ಚಾಕುವಿನಿಂದ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಆದರೆ ಇಲ್ಲಿ ಪ್ರಭಾವಿಗಳು ವಿಷಯ ಮುಚ್ಚಿಡಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಅವಕಾಶ ನೀಡದೇ ತಪ್ಪಿತಸ್ಥರನ್ನು ಬಂಧಿಸಬೇಕು. ಬಾಲಕಿಯು ಮನೆಯಲ್ಲಿ ವಿಷಯ ಹೇಳದೇ ಮುಚ್ಚಿಟ್ಟಿದ್ದಾರೆ ಎನ್ನಲಾಗಿದ್ದು, ಅತ್ಯಾಚಾರ ನಡೆದ ಎರಡು ದಿನ ಕಳೆದ ಮೇಲೆ ಆ ಬಾಲಕಿಗೆ ಹೊಟ್ಟೆ ನೋವು, ರಕ್ತಸ್ರಾವ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಚಿಕ್ಕಮ್ಮ ಬಂದು ವಿಚಾರಿಸಿದಾಗ ದುಷ್ಕೃತ್ಯದ ಬಗ್ಗೆ ಬಾಲಕಿ ಹೇಳಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ಬಾಲಕಿಯ ಪಾಲರು ಭಯಭೀತರಾಗಿದ್ದಾರೆ. ಅಲ್ಲದೆ ಆರೋಪಿಗಳನ್ನು ಪ್ರಭಾವಿಯೊಬ್ಬರು ರಕ್ಷಣೆ ಮಾಡುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಆರೋಪಿಸುತ್ತಿದ್ದಾರೆ. ಇಂತಹ ಕೃತ್ಯ ಎಸಗಿದವರ್ನ್ನು ಬಂಧಿಸಬೇಕು. ಅಂತೆಯೇ ನಿಷ್ಪಕ್ಷಪಾತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಪ್ರಸನ್ನಕುಮಾರ್, ಶಿವಣ್ಣ, ಶಿವಲಿಂಗಯ್ಯ, ನಂದೀಶ್, ಎಲ್ಲೇಗೌಡ, ಸುರೇಶ್, ರಾಮಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net