ಬಿಜೆಪಿ ಬಾವುಟ ಹಾರಿಸಲು ಪಕ್ವವಾಗಿದೆ ಕಾಲ

election nasmination
ಸಿಂಧನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಕರಿಯಪ್ಪ ನಾಮಪತ್ರ ಸಲ್ಲಿಕೆಗೂ ಮುನ್ನ ಮೆರವಣಿಗೆ ಜರುಗಿತು.
Published on


ಸಿಂಧನೂರು: ಬಿಜೆಪಿ ಅಭ್ಯರ್ಥಿ ಕೆ.ಕರಿಯಪ್ಪ ಮೆರವಣಿಗೆಯಲ್ಲಿ ಆಗಮಿಸಿ ಚುನಾವಣಾಧಿಕಾರಿ ಮಹೇಶ ಪೋತೆದಾರಗೆ ಬುಧವಾರ ನಾಮಪತ್ರ ಸಲ್ಲಿಸಿದರು.

ನಗರದ ಎಪಿಎಂಸಿ ಗಂಜ್ ಗಣೇಶ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಬಸ್ ನಿಲ್ದಾಣದ ಮೂಲಕ ಗಾಂಧಿವೃತ್ತ ತಲುಪಿತು. ಮಾಜಿ ಸಂಸದ ಹಾಗೂ ಕೆಪೆಕ್ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಮಾತನಾಡಿ, ಇದು ಬದಲಾವಣೆಯ ಕಾಲವಾಗಿದೆ. ಸಿಂಧನೂರಿನಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಲು ಕಾಲ ಪಕ್ವವಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಅಮರೇಗೌಡ ವಿರೂಪಾಪುರ, ತುಂಗಭದ್ರಾ ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಉದ್ಯಮಿ ರಾಜೇಶ ಹಿರೇಮಠ, ಪುರಸಭೆ ಮಾಜಿ ಅಧ್ಯಕ್ಷ ಕೆ.ಮರಿಯಪ್ಪ, ನಯೋಪ್ರಾ ಅಧ್ಯಕ್ಷ ಮಧ್ವರಾಜ ಆಚಾರ್ಯ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದ, ನಗರ ಮಂಡಲ ಅಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಜಿಪಂ ಮಾಜಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ರಾಯಪ್ಪ ವಕೀಲ, ಅಮರೇಶಪ್ಪ ಮೈಲಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net