

ವಿಜಯವಾಣಿ ಸುದ್ದಿಜಾಲ ಉಡುಪಿ
ಬಿಜೆಪಿ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಏ.6ರಂದು ಜಿಲ್ಲೆಯ ಎಲ್ಲ 1,112 ಬೂತ್ಗಳಲ್ಲಿ ಮತ್ತು ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ ಕುಂದಾಪುರ ತಿಳಿಸಿದರು.
ಉಡುಪಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆ ಮತ್ತು ಮಂಡಲ ಮಟ್ಟದಲ್ಲಿ ಪಕ್ಷದ ಧ್ವಜಾರೋಹಣ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು.
ಬಿಜೆಪಿಯ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ ಶೆಟ್ಟಿ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಉಪಾಧ್ಯಕ್ಷರಾದ ಕಿರಣಕುಮಾರ ಬೈಲೂರು, ಪ್ರಕಾಶ ಶೆಟ್ಟಿ ಪಾದೆಬೆಟ್ಟು, ಸುರೇಶ ಶೆಟ್ಟಿ ಕಾಡೂರು, ಮಹಾವೀರ ಹೆಗ್ಡೆ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ ಕಾವೇರಿ, ಜಿಲ್ಲಾ ಕೋಶಾಧಿಕಾರಿ ಮನೋಹರ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ ನಾಯಕ, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ, ಸದಾನಂದ ಬಳ್ಕೂರು, ಉದಯ ಎಸ್. ಕೋಟ್ಯಾನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ, ಶಿವಕುಮಾರ ಅಂಬಲಪಾಡಿ, ಮಾಧ್ಯಮ ಪ್ರಮುಖ ಶ್ರೀನಿಧಿ ಹೆಗ್ಡೆ, ಗಿರೀಶ ಎಂ. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲ್ಲೇಶ್ ಶೆಟ್ಟಿ ಉಪಸ್ಥಿತರಿದ್ದರು.