ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಬಿವೈವಿ

B.Y. vijayendra
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
Published on

ಶಿವಮೊಗ್ಗ: ಪಾಕಿಸ್ತಾನ್ ವಿರುದ್ಧ ಸೇನಾ ಕಾರ್ಯಾಚರಣೆಯಲ್ಲಿ ನಮ್ಮ ದೇಶದ ಸೈನಿಕರು ಅಪ್ರತಿಮ ಶೌರ್ಯ ಮೆರೆದಿದ್ದಾರೆ. ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸುವ ಭಾಗವಾಗಿ ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗಾ ಯಾತ್ರೆ ನಡೆಸಲಾಗುವುದು. ಮೇ 14ರಂದು ಬೆಂಗಳೂರಿನಲ್ಲಿ ಮೊದಲ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಇದೊಂದು ರಾಜಕೀಯೇತರ ಕಾರ್ಯಕ್ರಮವಾಗಿದೆ. ನಿವೃತ್ತ ಯೋಧರು, ವೈದ್ಯರು, ಇಂಜಿನಿಯರ್‌ಗಳು, ವಿವಿಧ ವೃತ್ತಿ, ವರ್ಗಗಳ ಸಾವಿರಾರು ಜನರು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಗಳೂರು, ಬೆಳಗಾವಿ ಮುಂತಾದ ಮಹಾನಗರಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಗುವುದು. 16ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ಶಿವಮೊಗ್ಗದ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವೆ. 18ರಿಂದ 23ರವರೆಗೆ ಎಲ್ಲ ತಾಲೂಕು ಕೇಂದ್ರಗಳಲ್ಲೂ ಯಾತ್ರೆ ನಡೆಯಲಿದೆ. ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ 5ರಿಂದ 6 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ಮಾಧ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ, ಸಹಪ್ರಮುಖ್ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net