

ಉಡುಪಿ: ಭಾರತೀಯ ಜನ ಸಂದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ದೂರದರ್ಶಿ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನಸಂದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯಲ್ಲಿ ಉದ್ದೇಶಿಸಿ ಮಾತನಾಡಿದರು.
ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅಂತ್ಯೋದಯ ಪರಿಕಲ್ಪನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅನೇಕ ಯೋಜನೆಗಳಲ್ಲಿ ಸಾಕಾರಗೊಂಡಿದೆ ಎಂದು ಮಟ್ಟಾರ್ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾವೇಂದ್ರ ಕಿಣಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.