ನೆಲಮಂಗಲದಲ್ಲಿ ಬಿಜೆಪಿ ವಿಜಯೋತ್ಸವ

Nela Ph 01 sambramacharane
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ.
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ನಗರದ ತಾಲೂಕು ಕಚೇರಿ ಮುಂಭಾಗ ಸಮಾವೇಶಗೊಂಡ ನೂರಾರು ಸಂಖ್ಯೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿಹಂಚಿ ವಿಜಯೋತ್ಸವ ಕೊಂಡಾಡಿದರು.
ಕುಣಿದು ಕುಪ್ಪಳಿಸಿದ ಕಾರ್ಯಕರ್ತರು: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ನಗರದೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ತಮಟೆ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ಚೌಧರಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿ ಬ್ರಷ್ಠಚಾರ ರಹಿತ ಆಡಳಿತ ಮತ್ತು ನಾಯಕತ್ವವನ್ನು ಒಪ್ಪಿಕೊಂಡಿರುವ ಇಡೀ ದೇಶದ ಜನತೆ, ನರೇಂದ್ರ ಮೋದಿಯನ್ನು ಮತ್ತೆ ಗೆಲ್ಲಿಸಿದ್ದಾರೆ. ದೇಶದ ಘನತೆ, ಗೌರವಗಳ ಜತೆಗೆ ಜಾಗತಿಕ ಮಟ್ಟದಲ್ಲಿ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ತಾಲೂಕಿನಲ್ಲಿ 32ಸಾವಿರಕ್ಕೂ ಅಧಿಕ ಅಂತರದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಜಯಗಳಿಸಿರುವುದು ಸಂತಸ ತಂದಿದೆ ಎಂದರು.
ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಉಪಾಧ್ಯಕ್ಷ ರಾಹುಲ್‌ಗೌಡ, ನಗರಸಭೆ ಸದಸ್ಯ ಎನ್.ಗಣೇಶ್, ಶಿವಕುಮಾರ್, ಅಂಜನಾಮೂರ್ತಿ, ಪೂರ್ಣಿಮಾಸುಗ್ಗರಾಜು, ಸುನೀಲ್‌ಮೂಡ್, ಹೆಚ್ಚುವರಿ ಸದಸ್ಯ ರಾಮಮೂರ್ತಿ, ಮುನಿರಾಜು, ಕೃಪಾನಂದ, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಕಾರ್ಯಾಧ್ಯಕ್ಷ ಬೂದಿಹಾಲ್‌ರಾಜು, ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ರಂಗನಾಥ್, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳಾಸುರೇಶ್, ನಗರಘಟದ ಅಧ್ಯಕ್ಷ ಕೇಶವ್, ಕಾರ್ಯದರ್ಶಿ ಸುಬ್ರಮಣಿ, ಪುನೀತ್, ಪುರಸಭಾ ಮಾಜಿ ಅಧ್ಯಕ್ಷ ರವಿ, ವಕೀಲ ಕನಕರಾಜು, ಮುಖಂಡ ಭವಾನಿಶಂಕರ್‌ಬೈರೇಗೌಡ್ರು, ವಸಂತ್, ಹೊನ್ನೇನಹಳ್ಳಿರವೀಶ್, ಬಾವಿಕೆರೆಮಹಂತೇಶ್, ಸುರೇಶ್, ಶೇಖರ್, ಮಂಜುನಾಥ್, ರಾಜಮ್ಮ, ಸೌಮ್ಯಾ, ಶೀಲಾ, ಮಂಜಮ್ಮ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net