ಮೋದಿ ಮುಂದಿಟ್ಟುಕೊಂಡು ಬಿಜೆಪಿ ಗೆಲುವು ಅಸಾಧ್ಯ

minister madhu bangarappa
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಇನ್ನೆರಡು ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಗೆಲ್ಲುವುದಕ್ಕೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಡಿಜಿಟಲ್ ಬ್ಯಾನರ್‌ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಅದೇ ಈ ಬಾರಿ ಮುಳುವಾಗಲಿದೆ. ಗೀತಾ ಅವರು ಜನಪ್ರತಿನಿಧಿಯಾಗಿ, ಜನರ ಧ್ವನಿಯಾಗಲಿದ್ದು ಶಿವಮೊಗ್ಗದ ಧ್ವನಿ ದೆಹಲಿಯ ಸಂಸತ್‌ನಲ್ಲಿ ಮೊಳಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯನ್ನು ಗ್ಯಾರಂಟಿಗಳ ಮೂಲಕ ಹಬ್ಬದ ರೀತಿ ಮಾಡಿದ್ದೇವು. ಹಾಗಾಗಿ ಈ ಬಾರಿಯೂ ಲೋಕಸಭಾ ಚುನಾವಣೆಯನ್ನು ಹಬ್ಬದ ರೀತಿಯಲ್ಲೇ ಮಾಡುತ್ತೇವೆ. ಶಿವಮೊಗ್ಗದಲ್ಲಿ ಗೀತಾ ಒಬ್ಬರೇ ಅಭ್ಯರ್ಥಿಯಲ್ಲ. ಪ್ರತಿಯೊಬ್ಬ ಕಾರ್ಯಕರ್ತನೂ ಅಭ್ಯರ್ಥಿಯೇ ಆಗಿದ್ದು, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದರು.
2014ರಲ್ಲಿ ಗೀತಾ ಅವರು ಸ್ಪರ್ಧೆ ಮಾಡಿದರೂ ಗೆಲುವು ಸಿಕ್ಕಿರಲಿಲ್ಲ. 2018ರ ಉಪ ಚುನಾವಣೆ ಮತ್ತು 2019ರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿದ್ದರೂ ವೈಯಕ್ತಿಕವಾಗಿ ಮತದಾರರನ್ನು ಸೆಳೆಯುವ ಪ್ರಯತ್ನ ನನ್ನಿಂದ ಆಗಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್ ಮೇಲೆ ಜನರ ವಿಶ್ವಾಸ ಹೆಚ್ಚಾಗಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಬೈಂದೂರು ಸೇರಿ ಪ್ರತಿ ತಾಲೂಕಿನಲ್ಲೂ ರಣತಂತ್ರ ರೂಪಿಸಲಾಗುವುದು ಎಂದು ಹೇಳಿದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಮುಖಂಡರಾದ ಎಸ್.ಕೆ.ಮರಿಯಪ್ಪ, ಎಸ್.ರವಿಕುಮಾರ್ ಎಚ್.ಸಿ.ಯೋಗೇಶ್, ಶಿವಕುಮಾರ, ಧರ್ಮರಾಜ್, ರಮೇಶ್ ಶಂಕರಘಟ್ಟ, ಜಿ.ಡಿ.ಮಂಜುನಾಥ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net