ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

nalin
Published on

ಮಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಎರಡು ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ,

ಈಗಾಗಲೇ ನಾವು ಈ ಎರಡೂ ಕ್ಷೇತ್ರ ಗೆಲ್ಲುವುದು ನಿಶ್ಚಿತವಾಗಿದೆ, ಗೆದ್ದ ನಂತರ ಮುನಿರತ್ನರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದರು.

ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಆಗುತ್ತದೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರದ್ದೇ ನಾಯಿ ಪಾಡಾಗಿದೆ,

ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ, ಪಕ್ಷದಲ್ಲಿ ಡಿಕೆಶಿ ಕೈ ಮೇಲಾಗುತ್ತಿದೆ ಎಂಬ ಕಾರಣಕ್ಕೆ ಏನೇನೋ ಹೇಳಿಕೆ ಕೊಡುತ್ತಿದ್ದಾರೆ, ಒಬ್ಬ ಮಾಜಿ ಸಿಎಂ ಈ ರೀತಿ ಮಾತನಾಡಬಾರದು ಎಂದರು.

ಮಹದಾಯಿ ವಿಚಾರದಲ್ಲಿ ಗೋವಾದ ಪರವಾಗಿ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದು ಕಾಂಗ್ರೆಸ್‌ನ ಇಬ್ಬಗೆ ನೀತಿಗೆ ಒಂದು ಉದಾಹರಣೆ. ಇಲ್ಲಿದ್ದಾಗ ಒಂದು ಅಲ್ಲಿದ್ದಾಗ ಒಂದು ಮಾತನಾಡುತ್ತಾರೆ, ಈ ಮೂಲಕ ಕಾಂಗ್ರೆಸ್ ರಾಜ್ಯದ ಏಳಿಗೆ ಪರವಾಗಿ ಇಲ್ಲ ಎನ್ನುವುದಕ್ಕೆ ನಿದರ್ಶನ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net