ಜಿಲ್ಲೆಯಲ್ಲಿ 7 ಕ್ಷೇತ್ರ ಗೆಲ್ಲುವ ವಿಶ್ವಾಸ ಬಿಜೆಪಿಗೆ

BJP_PC
Published on

ತುಮಕೂರು: ಜಿಲ್ಲೆಯಲ್ಲಿ ಬಿಜೆಪಿ ಯಶಸ್ವಿಯಾಗಿ ಚುನಾವಣೆ ಎದುರಿಸಿದ್ದು ಕನಿಷ್ಟ 7 ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.


ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ದಾಖಲೆಯ ಮತದಾನಕ್ಕೆ ಸಹಕರಿಸಿದ ಜಿಲ್ಲೆಯ ಜನರಿಗೆ ಬಿಜೆಪಿ ವತಿಯಿಂದ ಧನ್ಯವಾದಗಳು.
ನಮಗೆ ಯಾವುದೇ ಕ್ಷೇತ್ರದಲ್ಲಿ ಬಂಡಾಯದ ಬಿಸಿ ತಟ್ಟಿಲ್ಲ, ತುಮಕೂರು ನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್ ಜಯಗಳಿಸಲಿದ್ದಾರೆ ಎಂದರು.


ಸುದ್ದಿಗೋಷ್ಠಿಯಲ್ಲಿ ಕಾರ್ಪೋರೇಟರ್‌ಗಳಾದ ಕೃಷ್ಣಪ್ಪ, ಎಚ್.ಮಲ್ಲಿಕಾರ್ಜುನಯ್ಯ, ಸಿ.ಎನ್.ರಮೇಶ್, ಬಿ.ಎಸ್.ನಾಗೇಶ್, ಟಿ.ಆರ್.ಸದಾಶಿವಯ್ಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net