ನಮ್ಮ ಘೋಷಣೆ ನಿಜವಾಯ್ತು: ಬಿಜೆಪಿ ಮಾಜಿ ನಗರಾಧ್ಯಕ್ಷ ಎಚ್.ಆರ್.ಅರವಿಂದ್ ಹೇಳಿಕೆ

BJP workers celebration Mandya
Published on

ಮಂಡ್ಯ: ನಮ್ಮ ನಿರೀಕ್ಷೆಯಂತೆ ದೇಶಕ್ಕೆ ನರೇಂದ್ರ ಮೋದಿ ಪ್ರಧಾನಮಂತ್ರಿ, ರಾಜ್ಯಕ್ಕೆ ಕುಮಾರಸ್ವಾಮಿ ಕೇಂದ್ರ ಸಚಿವರು ಎನ್ನುವ ಘೋಷಣೆ ನಿಜವಾಗಿದೆ ಎಂದು ಬಿಜೆಪಿ ಮಾಜಿ ನಗರಾಧ್ಯಕ್ಷ ಎಚ್.ಆರ್.ಅರವಿಂದ್ ಹೇಳಿದರು.

ನಗರದ ಚಾಮುಂಡೇಶ್ವರಿ ಬಡಾವಣೆಯ ಬೇಕ್ ಪಾಯಿಂಟ್ ಬಳಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪಟಾಕಿ ಸಿಡಿಸಿ-ಸಿಹಿವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಜತೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಮತ್ತಷ್ಟು ಖುಷಿ ನೀಡಿದೆ ಎಂದು ನುಡಿದರು.

ಮುಖಂಡರಾದ ಮಲ್ಲಿಕಾರ್ಜುನ್, ಶಂಕರ್‌ಗೌಡ, ಲಕ್ಷ್ಮಣ್‌ಗೌಡ, ಯೋಗಾನಂದ, ಸಂತೋಷ್, ಶ್ರೀನಿವಾಸ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net