ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿವಾದ: ಸಂಸದ ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು

BJP workers complaint against MP Suresh mandya
Published on

ಮಂಡ್ಯ: ಅಖಂಡ ಭಾರತದ ಸಾರ್ವಭೌಮತೆಗೆ ಧಕ್ಕೆ ತರುವಂತೆ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿಕೆ ನೀಡಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ನಗರದ ಪಶ್ಚಿಮ ಠಾಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಎಸ್.ಶಿವಕುಮಾರ್ ಆರಾಧ್ಯ, ಎಂ.ಎಸ್.ನಂದೀಶ್, ಆನಂದ್, ಬಿ.ಟಿ.ಶಿವಲಿಂಗಯ್ಯ, ಪ್ರಸನ್ನಕುಮಾರ್, ಕೇಂದ್ರ ಬಜೆಟ್ ಬಗ್ಗೆ ಉತ್ತರಿಸಿದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು, ನಾವು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ದೇಶದ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುತ್ತೇವೆ ಎಂಬ ಪ್ರತಿಜ್ಞೆ ಸ್ವೀಕರಿಸಿರುತ್ತಾರೆ. ಆದರೆ, ಅವರ ಈ ಹೇಳಿಕೆಯಿಂದ ದೇಶಪ್ರೇಮಿಗಳಿಗೆ ನೋವಾಗಿದ್ದು, ಪ್ರತ್ಯೇಕವಾದಿಗಳಿಗೆ ಕುಮ್ಮಕ್ಕು ನೀಡುವ ಹೇಳಿಕೆಯಾಗಿದೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 124 ಎ ಪ್ರಕಾರ ಅಪರಾಧವಾಗಿದ್ದುಘಿ, ತಕ್ಷಣ ಡಿ.ಕೆ.ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net