ಪಾದಯಾತ್ರೆಯಲ್ಲಿ ಹು-ಧಾ ಬಿಜೆಪಿ ಕಾರ್ಯಕರ್ತರು

New BJP
Published on

ಹುಬ್ಬಳ್ಳಿ : ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗಿನ ಪಾದಯಾತ್ರೆಯಲ್ಲಿ ಹುಬ್ಬಳ್ಳಿ-ಧಾರವಾಡದ ಕಾರ್ಯಕರ್ತರು ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಇಲ್ಲಿನ ಅರವಿಂದ ನಗರದ ಮಹಾನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಮಹಾನಗರ ಜಿಲ್ಲೆಯಿಂದ ಆಗಸ್ಟ್ 5 ರಂದು ಮಹಾನಗರದ ಪ್ರತಿ ಮಂಡಳದಿಂದ ಕನಿಷ್ಠ 50 ಜನ ತೆರಳಿ, 6 ರಂದು ಹಾಸನದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು. ಮೈಸೂರಿನಲ್ಲಿ ಮುಕ್ತಾಯಗೊಳ್ಳುವ ಪಾದಯಾತ್ರೆಗೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದರು.

ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಮಾತನಾಡಿದರು. ಮಹಾಪೌರ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ದುರ್ಗಮ್ಮ ಬಿಜವಾಡ, ಮಾಜಿ ಶಾಸಕ ಅಶೋಕ ಕಾಟವೆ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ, ನಾರಾಯಣ ಜರತಾರಘರ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸುನೀಲ ಮೋರೆ, ರವಿ ನಾಯಕ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net