

ಗಂಗೊಳ್ಳಿ: ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು.
ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಲ್.ಎನ್.ಭೋಜೇಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಮಂಡಲದ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಉಡುಪಿ ಜಿಲ್ಲಾ ಸಂಚಾಲಕರಾದ ಕಾಡೂರು ಸುರೇಶ್ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್, ಅನಿತಾ ಶ್ರೀಧರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಬಿಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಸ್ವಾಗತಿಸಿ, ರಾಜೇಶ ಕಡ್ಗಿ ಕಾರ್ಯಕ್ರಮ ನಿರ್ವಹಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್. ವಂದಿಸಿದರು.