ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

SIRSI BJP PROTEST
Published on

ಶಿರಸಿ: ರಾಜ್ಯ ಸರ್ಕಾರ ಬಡವರ ಮತ್ತು ರೈತರ ಜಮೀನನ್ನು ವಕ್ಪ್ ಮಂಡಳಿಗೆ ತ್ವರಿತವಾಗಿ ಹಸ್ತಾಂತರಿಸುವ ಕಾರ್ಯ ನಡೆಸಿದೆ. ವಕ್ಪ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶ ಹೊರಡಿಸುವ ಜೊತೆ ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫೀಕೆಷನ್ ಹಿಂಪಡೆಯಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ನಗರ ಹಾಗೂ ಗ್ರಾಮೀಣ ಮಂಡಳದ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು.

ತಹಸೀಲ್ದಾರ್ ಶ್ರೀಧರ ಮಂದಲಮನಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರಸಭೆ ಅಧ್ಯಕ್ಷೆ ಶರ್ವಿುಳಾ ಮಾದನಗೇರಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹರ್ತೆಬೈಲ್, ನಗರ ಮಂಡಳ ಅಧ್ಯಕ್ಷ ಆನಂದ ಸಾಲೇರ್, ನಂದನ್ ಸಾಗರ ,ಶಿಲ್ಪಾ ನಾಯ್ಕ, ಕುಮಾರ ನಾಯ್ಕ, ವಿ.ಎನ್. ಹೆಗಡೆ ಬೊಮ್ನಳ್ಳಿ, ಗಣಪತಿ ನಾಯ್ಕ ಸೇರಿ ನೂರಾರು ಕಾರ್ಯಕರ್ತರು ಇದ್ದರು.

ಬಿಜೆಪಿ ಪ್ರಮುಖ ಸದಾನಂದ ಭಟ್ ಮಾತನಾಡಿ, ರಾಜ್ಯದ ವಿಜಯಪುರ ಜಿಲ್ಲೆಯ ರೈತರ 1,500 ಎಕರೆ ಜಮೀನು ವಕ್ಸ್ ಆಸ್ತಿಯೆಂದು ಘೊಷಿಸಿ ತಹಸೀಲ್ದಾರ್​ರಿಂದ ಪುಷ್ಟೀಕರಿಸಿ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ವಿಧಾನಸೌಧವೂ ಸೇರಿ ಹಲವಾರು ಪ್ರಮುಖ ಆಸ್ತಿಗಳು ವಕ್ಪಗೆ ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆಯಿತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಪ್ ಪ್ರತಿಪಾದಿಸುತ್ತಿದೆ. ಸವಣೂರು ತಾಲೂಕು ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಪ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಸ್ ಆಸ್ತಿ ಎಂದು ವಕ್ಪ್ ಹಕ್ಕು ಮಂಡಿಸಿದೆ. ಸರ್ಕಾರಿ ಅಧೀನದಲ್ಲಿರುವ ಆಸ್ತಿಗಳನ್ನೇ ತನ್ನದೆಂದು ವಕ್ಪ್ ಬೋರ್ಡ್ ಹೇಳುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇಗುಲಕ್ಕೆ ಸೇರಿದ 6 ಗುಂಟೆ ಜಮೀನು ವಕ್ಪ್ ಆಸ್ತಿ ಎಂದು ನಮೂದಾಗಿದೆ. ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಪ್ ಆಸ್ತಿ ಎಂದು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. 2000 ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಾಲಯವೂ ವಕ್ಪ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ ವಕ್ಪ್ ಮಂಡಳಿಯಿಂದ ಬರುತ್ತಿದೆ. ರೈತರ ಭೂಮಿಯನ್ನು ಕಿತ್ತುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತದೆ. ಇಡೀ ರಾಜ್ಯವನ್ನು ಮುಸ್ಲಿಂ ಸಮುದಾಯಕ್ಕೆ ಹಂಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ. ಬಿಜೆಪಿ ಇರುವವರೆಗೂ ಅದು ಸಾಧ್ಯವಿಲ್ಲ. ಹೋರಾಟ ಮಾಡೇ ಮಾಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net