

ಮಂಡ್ಯ: ಮಂಗಳೂರಿನಲ್ಲಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ನಗರದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಘೋಷಣೆ ಕೂಗಿದರು. ಸುಹಾಸ್‌ಶೆಟ್ಟಿ ಅವರನ್ನು ಹಂತಕರು ಸಾರ್ವಜನಿಕ ಸ್ಥಳದಲ್ಲೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದೊಂದು ಅಮಾನವೀಯ ಕೃತ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಪರ ಸಂಘಟನೆಗಳ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ನಗರ ಘಟಕದ ಅಧ್ಯಕ್ಷ ವಸಂತಕುಮಾರ್, ಮಾಜಿ ಅಧ್ಯಕ್ಷ ವಿವೇಕ್, ಮಂಡ್ಯ ಗ್ರಾಮಾಂತರ ಅಧ್ಯಕ್ಷ ಭೀಮೇಶ್, ಚಾಮರಾಜು, ನಾಗಾನಂದ, ಶಿವಲಿಂಗು, ಶಿವಕುಮಾರ್ ಆರಾಧ್ಯ ಇತರರಿದ್ದರು.