ಡೆಂಘೆ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಸೊಳ್ಳೆ ಪರದೆ ಹೊದ್ದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

BJP workers protest Mandya
Published on

ಮಂಡ್ಯ: ಡೆಂಘೆ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೊಳ್ಳೆ ನಿಯಂತ್ರಣ ಔಷಧ ಸಿಂಪಡಿಸಿ, ಸೊಳ್ಳೆ ಪರದೆ ಹೊದ್ದು ವಿನೂತನವಾಗಿ ಪ್ರತಿಭಟಿಸಿದರು.

ನಗರಸಭೆ ಆವರಣದಲ್ಲಿ ಜಮಾಯಿಸಿದ ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಟ ನೇತೃತ್ವದಲ್ಲಿ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗಿ ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷೃದಿಂದಾಗಿ ಸೊಳ್ಳೆಗಳಿಂದ ಕಚ್ಚಿಸಿಕೊಂಡು ಜನತೆ ಸಾವನ್ನಪ್ಪುವ ಪರಿಸ್ಥಿತಿ ಎದುರಾಗಿದೆ. ಐದು ಗ್ಯಾರಂಟಿ ನಡುವೆ ಜನರಿಗೆ ಸಾವಿನ ಗ್ಯಾರಂಟಿ ನೀಡಿದ್ದಾರೆ. ಕಳೆದ 6 ತಿಂಗಳಿನ ಹಿಂದೆ ರಾಜ್ಯದಲ್ಲಿ ಡೆಂಘೆ ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಸೊಳ್ಳೆ ಪರದೆ ಹೊದ್ದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಕಾಣಿಸಿಕೊಂಡಿದೆ. ಆದರೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆ ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಂಡಿಲ್ಲ. ಇಂತಹ ನಿರ್ಲಕ್ಷೃದಿಂದ ರಾಜ್ಯದಲ್ಲಿ ಹಲವಾರು ಮಕ್ಕಳು, ವೃದ್ಧರು ಬಲಿಯಾಗಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಕೆ.ಪರಮಾನಂದ, ಅರವಿಂದ್, ಡಾ.ಸದಾನಂದ, ಶಿವಕುಮಾರ ಆರಾಧ್ಯ, ಸಿ.ಟಿ.ಮಂಜುನಾಥ್, ದೇವಿರಮ್ಮ, ಪ್ರಸನ್ನಕುಮಾರ್, ಎಸ್.ಸಿ.ಯೋಗೇಶ್, ಬಿ.ಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net