ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಹಚ್ಚಲು ಮುಂದಾದ ಬಿಜೆಪಿ ಕಾರ್ಯಕರ್ತರು

25 ckm 4
ಚಿಕ್ಕಮಗಳೂರಿನ ಕಾಂಗ್ರೆಸ್ ಕಚೇರಿಗೆ ತುರ್ತು ಪರಿಸ್ಥಿತಿ ಕರಾಳ ದಿನವನ್ನು ವಿರೋಧಿಸಿ ಪೋಸ್ಟರ್ ಅಂಟಿಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
Published on

ಚಿಕ್ಕಮಗಳೂರು: ತುರ್ತು ಪರಿಸ್ಥಿತಿ ಕರಾಳದಿನ ವಿರೋಧಿಸಿ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಲು ಮುಂದಾಗಿದ್ದ ಬಿಜೆಪಿ ನಗರ ಘಟಕದ ೨೦ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಅಧ್ಯಕ್ಷತೆಯಲ್ಲಿ ಪೋಸ್ಟರ್ ಅಂಟಿಸುವ ಅಭಿಯಾನ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಾಂಚಜನ್ಯ ಕಚೇರಿಯಿಂದ ಕಾಲ್ನಡಿಗೆ ಮೂಲಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪೋಸ್ಟರ್ ಅಂಟಿಸಲು ಹೊರಟಾಗ ಮಾರ್ಗಮಧ್ಯದಲ್ಲೇ ತಡೆದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಬಳಿಕ ಮಾತನಾಡಿದ ರೈತ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ತುರ್ತುಪರಿಸ್ಥಿತಿ ಘೋಷಣೆಗೊಂಡು ಐವತ್ತು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಡೆಯನ್ನು ವಿರೊಧಿಸಿ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಮುಂದಾಗಿದ್ದೆವು. ಚಿಕ್ಕಮಗಳೂರು ಸೇರಿದಂತೆ ರಾಜ್ಯಾಧ್ಯಂತ ಪೋಸ್ಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
೧೯೭೫ರAದು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ಧ ವೇಳೆ ಇಂದಿರಾಗಾAಧಿ ತುರ್ತು ಪರಿಸ್ಥಿತಿ ಹೇರಿ ಪ್ರತಿ ಪಕ್ಷಗಳ ಸಾವಿರಾರು ನಾಯಕರನ್ನು ಜೈಲಿಗಟ್ಟಿದರು. ಪತ್ರಿಕಾ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿ ಅಧಿಕಾರ ಉಳಿಸಿಕೊಳ್ಳಲು ಯತ್ನಿಸಿದ್ದರು. ಕಾಂಗ್ರೆಸ್ ಸರ್ಕಾರ ಸಂವಿಧಾನಕ್ಕೆ ಅತಿ ಹೆಚ್ಚು ಬಾರಿ ತಿದ್ದುಪಡಿಗೊಳಿಸಿ ಇತಿಹಾಸದಲ್ಲಿ ಕರಾಳದಿನವಾಗಿ ಉಳಿದಿದೆ ಎಂದರು.
ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ ದೊಡ್ಡ ದ್ರೋಹ ಮಾಡಿದೆ. ಇಂದಿರಾಗಾAಧಿ ಸ್ವಾರ್ಥಕ್ಕಾಗಿ ಸಂವಿಧಾನವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಪ್ರಜಾಪ್ರಭುತ್ವವಾದಿ ಹೋರಾಟಗಾರರನ್ನು, ವಿರೋಧ ಪಕ್ಷದ ರಾಜಕೀಯ ದುರೀಣನ್ನು ಸೆರೆವಾಸ ಅನುಭವಂತೆ ಮಾಡಿದ್ದರು ಎಂದು ದೂರಿದರು.
ರಾಷ್ಟçದಲ್ಲಿ ಭಾರತೀಯ ಜನತಾ ಪಾರ್ಟಿ ಅಂಬೇಡ್ಕರ್ ಆಶಯಗಳಿಗೆ ತಕ್ಕಂತೆ ನೀತಿ, ನಿಯಮಗಳ ನ್ನು ರೂಪಿಸಿತ್ತು. ಸಂವಿಧಾನವನ್ನು ಬಿಜೆಪಿ ತಿದ್ದುಪಡಿ ಮಾಡುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದ ವಿಷಯ. ಸುಮಾರು ೯೦ಕ್ಕೂ ಹೆಚ್ಚು ಭಾರಿ ಕಾಂಗ್ರೆಸ್ ಸಂವಿಧಾನವನ್ನು ತನಗೆ ಬೇಕಾದಂತೆ ತಿದ್ದುಪಡಿಗೊಳಿಸಿ ಇದೀಗ ಅಂಬೇಡ್ಕರ್ ಪರವಾಗಿ ಮಾತನಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ನರೇಂದ್ರ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ನಂದೀಶ್, ಪ್ರಧಾನ ಕಾರ್ಯದರ್ಶಿ ಮಧು, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಕಾರ್ತೀಕ್, ಪ್ರಧಾನ ಕಾರ್ಯದರ್ಶಿ ಸಚ್ಚಿನ್, ನಗರ ಯುವಮೋರ್ಚಾ ಅಧ್ಯಕ್ಷ ಜೀವನ್, ಪ್ರಧಾನ ಕಾರ್ಯದರ್ಶಿ ಗೌತಮ್, ಮುಖಂಡ ರೇವನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net