ಬಿಜೆಪಿ ಕಾರ್ಯಕಾರಿ ಸಭೆ ಸೋಮವಾರ

meeting
Published on

ಹಿರೇಕೆರೂರ: ಮಾಜಿ ಸಚಿವ ಬಿ.ಸಿ. ಪಾಟೀಲರ ತಾಲೂಕಿನ ಬಾಳಂಬೀಡ ಗ್ರಾಮದ ನಿವಾಸದಲ್ಲಿ ಆ. 28ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕು ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಏರ್ಪಡಿಸಲಾಗಿದೆ. ಬಿಜೆಪಿ ಮಂಡಲದ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಜಿಪಂ ಸದಸ್ಯರು, ಮಂಡಲದ ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರಗಳ ಐವರು ಪ್ರಮುಖರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಸದಸ್ಯರು ಭಾಗವಹಿಸುವರು. ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಭೆಗೆ ಆಗಮಿಸಬೇಕು ಎಂದು ಬಿಜೆಪಿ ಮಂಡಲದ ತಾಲೂಕಾಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net