

ಕೊಪ್ಪಳ: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಜು.26ರಂದು ನಿವೃತ್ತ ಯೋಧರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಉಚಿತ ತಪಾಸಣೆ ಹಾಗೂ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮೌನೇಶ ದಢೇಸುಗೂರು ಹೇಳಿದರು.
ಕಾರ್ಗಿಲ್ ವಿಜಯ ಸಾಧಿಸಿ 25 ವರ್ಷಗಳಾಗಿದೆ. ಅದರ ಅಂಗವಾಗಿ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ ಸಿಂಹ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಾಳೆಕಾಯಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಅಂದು ಸಂಜೆ 4 ಗಂಟೆಗೆ ಭಾಗ್ಯನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ. ನಿವೃತ್ತ ಯೋಧರಿಗೆ ಸನ್ಮಾನ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಜೆ 6 ಗಂಟೆಗೆ ಕೊಪ್ಪಳ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು. ನಿವೃತ್ತ ಯೋಧರು ಹಾಗೂ ಅವರ ಕುಟುಂಬದವರಿಗೆ ಕೆ.ಎಸ್.ಆಸ್ಪತ್ರೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗುವುದು. ಅವರ ಬೇಡಿಕೆಗಳನ್ನು ಆಲಿಸಿ ಜಿಲ್ಲಾಡಳಿತ, ಸರ್ಕಾರದ ಗಮನ ಸೆಳೆದು ಪರಿಹರಿಸಲು ಯತ್ನಿಸಲಾಗುವುದೆಂದು ತಿಳಿಸಿದರು. ಯುವ ಮೋರ್ಚಾ ಪದಾಧಿಕಾರಿಗಳಾದ ರೋಹಿತ್ ಮಲ್ಲಾಡರ್, ಮಹಾಲಕ್ಷಿ$್ಮ ಕಂದಾರಿ, ರಮೇಶ ಕವಲೂರು, ಅಮಿತ್ ಕಂಪ್ಲಿಕರ್ ಇತರರಿದ್ದರು.