ಬಿಜೆಪಿ ಯುವ ಮೋರ್ಚಾದಿಂದ ಪೋಸ್ಟರ್ ಅಭಿಯಾನ

mng-25june-yuva morcha
Published on



ಮಂಗಳೂರು : ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ವಿರುದ್ದ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪೋಸ್ಟರ್ ಅಭಿಯಾನ ನಡೆಯಿತು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ‘ ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿ ದೇಶದ ಜನತೆಗೆ ಅನ್ಯಾಯ ಎಸಗಿತ್ತು. ಪತ್ರಿಕಾ ಸ್ವಾತಂತ್ರೃವನ್ನು ಕಸಿದು, ಪ್ರತಿಪಕ್ಷಗಳ ಮುಖಂಡರನ್ನು ಬಂಧಿಸಲಾಗಿತ್ತು. ಸಂವಿಧಾನದ ಆಶಯ ಉಲ್ಲಂಘನೆ
ಮಾಡಲಾಗಿತ್ತು. ಈಗ ಅದೇ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸಂವಿಧಾನ ವಿರೋಧಿ ಎನ್ನುತ್ತಿದೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರ ಅಂತ್ಯಕ್ರಿಯೆ ಸಂದರ್ಭದಲ್ಲೂ ಅವಮಾನಿಸಿದ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸಂವಿಧಾನ ವಿರೋಧಿ ಎನ್ನುವುದು
ಅರ್ಥಹೀನವಾಗಿದೆ ಎಂದರು.
ಶಾಸಕ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ಮಾತನಾಡಿ, ಕಾಂಗ್ರೆಸ ಪಕ್ಷದವರು ಸಂವಿಧಾನದ ರಕ್ಷಕರು ಎಂದು ಹೇಳಿಕೊಂಡು ತುರ್ತು ಪರಿಸ್ಥಿತಿ ಹೇರಿ ಜನತೆಗೆ ದ್ರೋಹ ಮಾಡಿದ್ದಾರೆ. ಅಂಬೇಡ್ಕರ್ ಹಿತೈಷಿಗಳು ಎನ್ನುತ್ತಾ ಸಂವಿಧಾನಕ್ಕೆ ಮೊದಲ ತಿದ್ದುಪಡಿ ತಂದಿರುವುದು , ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ವರ್ತನೆ ತೋರಿರುವುದು ಕಾಂಗ್ರೆಸ್. ನಾವು ಸಂವಿಧಾನದ ರಕ್ಷಕರು ಎಂದು ಪದೇ ಪದೇ ಹೇಳುವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಭರತ್‌ರಾಜ್ ಕೃಷ್ಣಾಪುರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net