ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ

09-GPT-3
Published on
  • ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷರೂ ಆದ ಮಾಜಿ ಶಾಸಕ ನಿರಂಜನ ಕುಮಾರ್ ಆರೋಪಿಸಿದರು. ಸಂಸತ್ ಚುನಾವಣೆ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಪಕ್ಷ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಿದೆಯೇ ಹೊರತು ಕ್ಷೇತ್ರದ ಅಭಿವೃದ್ಧಿಗೆ ಬಿಡಿಗಾಸನ್ನೂ ನೀಡುತ್ತಿಲ್ಲ. ಸ್ಥಳೀಯ ಶಾಸಕರೂ ಯಾವುದೇ ರೀತಿಯ ಅನುದಾನವನ್ನು ತಂದು ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುತ್ತಿಲ್ಲ ಎಂದು ಅವರು ದೂರಿದರು.
    ಕನಕದಾಸ ವೃತದಲ್ಲಿ ಅತಿ ಹೆಚ್ಚಿನ ವಾಹನಗಳ ಸಂಚಾರವಿದ್ದರೂ ರಸ್ತೆಯಲ್ಲಿ ಮುರಿದಿರುವ ಡೆಕ್ ಸ್ಲಾಬ್ ಅನ್ನು ದುರಸ್ತಿ ಪಡಿಸಲು ಸಾಧ್ಯವಾಗಿಲ್ಲ. ಒಟ್ಟಾರೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಚಟುವಟಿಕೆಗಳನ್ನು ಮರೆತಿದೆ ಎಂದು ಅವರು ಆರೋಪಿಸಿದರು
    ಲೋಕಸಭಾ ಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ಬಾಲರಾಜು ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ ನಾಗರಿಕರಿಗೆ ಧನ್ಯವಾದ ಸಮರ್ಪಿಸುವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net