ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಒತ್ತು

Ckm Bjp
ಚಿಕ್ಕಮಗಳೂರು ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ವಿಧಾನಪರಿಷತ್ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಎಚ್.ಸಿ.ಕಲ್ಮರುಡಪ್ಪ, ಡಿ.ಎನ್.ಜೀವರಾಜ್, ದೀಪಕ್ ದೊಡ್ಡಯ್ಯ, ಪ್ರೇಮಕುಮಾರ್, ದೇವರಾಜ ಶೆಟ್ಟಿ ಇತರರಿದ್ದರು.
Published on

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಬಿ.ಎಸ್.ಯಡಿಯೂರಪ್ಪ ಶೇ.33 ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳೆಯರಿಗೆ ಶೇ.33 ರಾಜಕೀಯ ಮೀಸಲಾತಿ ಜಾರಿಗೆ ತರುತ್ತಿದ್ದಾರೆ. ಈ ಮೂಲಕ ಪಕ್ಷ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ವಿಧಾನಪರಿಷತ್ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಹಿಳೆಯರ ರಾಜಕೀಯ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಆಸಕ್ತಿ ತೋರಿಸಿಲ್ಲ. ಮಹಿಳೆಯರ ಪರ ಕಾಳಜಿ ಇದ್ದಿದ್ದರೆ ಇಂದಿರಾಗಾಂಧಿ ಆಡಳಿತದಲ್ಲೇ ಶೇ.33 ಮೀಸಲಾತಿ ಜಾರಿಗೆ ತರಬಹುದಿತ್ತು. ಆದರೆ ಈಗ ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಟೀಕಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಮಾಜಿ ಸಚಿವ ಡಿ.ಎನ್.ಜೀವರಾಜ್, ಮಾಜಿ ಶಾಸಕ ಡಿ.ಎಸ್.ಸುರೇಶ್, ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಸಂಚಾಲಕರಾದ ಪುಟ್ಟೇಗೌಡ, ಪ್ರೇಮಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ ಶೆಟ್ಟಿ, ಅವಿನಾಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net