ಬಿಜೆಪಿ ಸೇರ್ಪಡೆ ಖಚಿತ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

Eshwarappa K.S.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಬಿಜೆಪಿ ಸೇರ್ಪಡೆಗೆ ಕರೆ ಬಂದಿದ್ದು ಎಲ್ಲ ಮುಖಂಡರೊಂದಿಗೆ ಕುಳಿತು ಚರ್ಚೆ ಮಾಡಿದ ನಂತರ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿಜೆಪಿ ಸೇರ್ಪಡೆ ಖಚಿತಪಡಿಸಿದ ಅವರು ಯಾವಾಗ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದೆ. ಪಕ್ಷದಿಂದ ಕರೆ ಬಂದಿರುವುದು ನಿಜ. ಆದರೆ ಆ ಬಗ್ಗೆ ಈಗಲೇ ಏನನ್ನೂ ಬಹಿರಂಗಪಡಿಸುವುದಿಲ್ಲ. ಮುಂದೆ ಮತ್ತೆ ಆ ಕುರಿತು ಪ್ರಸ್ತಾಪ ಮಾಡುತ್ತೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಾನೂ ಸೇರಿ ನಿಷ್ಠಾವಂತ ಕಾರ್ಯಕರ್ತರು ಪಕ್ಷಕ್ಕೆ ಪ್ರಾಧಾನ್ಯತೆ ಕೊಡುತ್ತೇವೆ. ಹಿಂದಿನಿಂದಲೂ ಕೊಡುತ್ತ ಬಂದಿದ್ದೇವೆ. ಮುಂದೆಯೂ ಕೊಡುತ್ತೇವೆ. ಅದರಲ್ಲಿ ಯಾವ ಅನುಮಾನವೂ ಇಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net