

ಗಜೇಂದ್ರಗಡ: ದುಬಾರಿ ದಿನಗಳಲ್ಲಿ ಕಡಿಮೆ ದರದಲ್ಲಿ ಅಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನವಾಗಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ನಲ್ಲಿ ಟಿಫಿನ್‌ಗೆ 5 ರೂ., ಊಟಕ್ಕೆ 10 ರೂ. ನಿಗದಿ ಮಾಡಿದ್ದು. ಒಂದು ದಿನಕ್ಕೆ ಬೆಳಗ್ಗೆ 300 ಟಿಫಿನ್, ಮಧ್ಯಾಹ್ನ 300 ಊಟ, ರಾತ್ರಿ 300 ಊಟದ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬಡವರಿಗೆ, ಹಳ್ಳಿಗಳಿಂದ ಶಾಲಾ-ಕಾಲೇಜ್ ಮಕ್ಕಳಿಗೆ ಅನೂಕೂಲವಾಗಲಿದೆ. ಇಂದಿರಾ ಕ್ಯಾಂಟೀನ್ ಕಟ್ಟಡ ಸುತ್ತಲೂ ಕಾಂಪೌಂಡ್ ನಿರ್ಮಿಸುವಂತೆ ಪುರಸಭೆ ಸಿಬ್ಬಂದಿಗೆ ಸೂಚಿಸಿದರು.
ಗಜೇಂದ್ರಗಡ ಜಿಲ್ಲೆಯಲ್ಲಿಯೇ ಅತ್ಯಂತ ವೇಗವಾಗಿ ಬೇಳೆಯುತ್ತಿದೆ. ಇಲ್ಲಿ ಸರ್ಕಾರದ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ ಅನೇಕ ಕಾಮಗಾರಿಗಳನ್ನು ಜಾರಿ ತರಲು ಹೋದರೆ ಸ್ಥಳೀಯ ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ. ಮತಕ್ಷೇತ್ರದಲ್ಲಿಯೇ ಗಜೇಂದ್ರಗಡವನ್ನು ಸಂಪೂರ್ಣ ಅಭಿವೃದ್ಧಿಪಡಿಸುವುದು ಮುಖ್ಯವಾಗಿದೆ. ಇದಕ್ಕೆ ಯಾರೇ ಅಡ್ಡ ಬಂದರು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.
ಜಿಲ್ಲಾ ಯೋಜನಾ ನಿರ್ದೇಶಕ ನಗರಾಭಿವೃದ್ಧಿಕೋಶ ಬಸನಗೌಡ ಕೊಟ್ಟೂರು, ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಸಿದ್ದಣ್ಣ ಬಂಡಿ, ಪುರಸಭೆ ಸದಸ್ಯರಾದ ಶಿವರಾಜ ಘೋರ್ಪಡೆ, ಮುರ್ತುಜಾ ಡಾಲಾಯತ, ರಾಜು ಸಾಂಗ್ಲಿಕರ, ಮುದಿಯಪ್ಪ ಮುಧೋಳ, ಶರಣಪ್ಪ ಉಪ್ಪಿನಬೆಟಗೇರಿ, ಲಕ್ಷ್ಮೀ ಮುಧೋಳ, ವಿಜಯಾ ಮಳಗಿ, ವೀರಣ್ಣ ಶೆಟ್ಟರ, ಬಸವರಾಜ ಶಿಳವಂತರ, ಮಂಜುಳಾ ರೇವಡಿ, ತಾರಾಸಿಂಗ್ ರಾಠೋಡ ಇತರರು ಇದ್ದರು.