ಜನರನ್ನು ಒಡೆದಾಳುವುದು ಬಿಜೆಪಿ ನೀತಿ

dist congress office
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರನ್ನು ಕಾರ್ಯಕರ್ತೆಯರು ಸನ್ಮಾನಿಸಿದರು. ಬಲ್ಕಿಷ್ ಬಾನು, ಅನಿತಾಕುಮಾರಿ, ಪುಷ್ಪಾ ಶಿವಕುಮಾರ್, ಯಮುನಾ ರಂಗೇಗೌಡ, ವಿಜಯಲಕ್ಷ್ಮೀ ಪಾಟೀಲ್, ಸ್ಟೆಲ್ಲಾ ಮಾರ್ಟಿನ್ ಇದ್ದರು.
Published on

ಶಿವಮೊಗ್ಗ: ಜಾತಿ, ಮತ, ಧರ್ಮದ ಹೆಸರಲ್ಲಿ ಜನರನ್ನು ಒಡೆದಾಳುವುದು ಬಿಜೆಪಿ ಕೆಲಸ. ಆದರೆ ಎಲ್ಲರನ್ನೂ ಒಗ್ಗೂಡಿಸುವುದು ಕಾಂಗ್ರೆಸ್ ನೀತಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂಬ ಕಳಂಖ ಹೊತ್ತು ತೊಲಗಿತು. ನಮ್ಮ ಸರ್ಕಾರ ಬಂದ ಮೇಲೆ ಗ್ಯಾರಂಟಿಗಳ ಜತೆಗೆ ಜನಪರ ಕೆಲಸಗಳನ್ನು ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 135 ಸೀಟು ಬಂದಿರುವುದಕ್ಕೆ ಪಕ್ಷದ ಕಾರ್ಯಕರ್ತರ ಶ್ರಮ ಕಾರಣ. ಜನರಿಗೋಸ್ಕರ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಅನೇಕ ಅಭಿವೃದ್ಧಿ ಕೆಲಸಗಳೂ ಆಗುತ್ತಿವೆ. ಮುಂಬರುವ ಜಿಪಂ, ತಾಪಂ, ಮಹಾನಗರ ಪಾಲಿಕೆ ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕಿದೆ. ಅಧಿಕಾರದಲ್ಲಿದ್ದರೆ ಮಾತ್ರ ಜನರಿಗೆ ಸೇವೆ ಮಾಡಲು ಸಾಧ್ಯ. ಹಾಗಾಗಿ ಯೋಜನೆಗಳ ಬಗ್ಗೆ ಎಲ್ಲರಿಗೂ ತಿಳಿಸಬೇಕು. ವಿಶೇಷವಾಗಿ ಮಹಿಳೆಯರಿಗೆ ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರತಿ ಬೂತ್, ವಾರ್ಡ್ ಮಟ್ಟದಲ್ಲೂ ಪಕ್ಷ ಸಂಘಟನೆ ಮಾಡಬೇಕು. ಬೂತ್ ಮಟ್ಟದಲ್ಲಿ, ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಸದಸ್ಯತ್ವ ನೋಂದಣಿ ಮಾಡಬೇಕು. ಜತೆಗೆ ತಮ್ಮ ಆರೋಗ್ಯದ ಕಡೆಯೂ ಗಮನ ಹರಿಸುವಂತೆ ಹೇಳಿದರು.

ಸಚಿವ ಮಧು ಬಂಗಾರಪ್ಪ, ಎಂಎಲ್ಸಿ ಬಲ್ಕಿಷ್ ಬಾನು, ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಮುಖರಾದ ಎಚ್.ಸಿ.ಯೋಗೇಶ್, ಅನಿತಾಕುಮಾರಿ, ಕಲಗೋಡು ರತ್ನಾಕರ್, ಸಿ.ಎಸ್.ಚಂದ್ರಭೂಪಾಲ್, ಡಾ. ಶ್ರೀನಿವಾಸ್ ಕರಿಯಣ್ಣ, ಕಲೀಂಉಲ್ಲಾ, ಶಿವಕುಮಾರ್, ವಿಜಯಲಕ್ಷ್ಮೀ ಪಾಟೀಲ್, ಯಮುನಾ ರಂಗೇಗೌಡ, ವಿಶ್ವನಾಥ ಕಾಶಿ, ಎಸ್.ಪಿ.ಶೇಷಾದ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net