

ರಾವಂದೂರು : ಕಾಂಗ್ರೆಸ್ ಜನಪರ ಯೋಜನೆಗಳು ಬಿಜೆಪಿ ಮುಖಂಡರನ್ನು ನಿದ್ರೆ ಗೆಡೆಸಿದೆ ಎಂದು ಸಚಿವ ಕೆ. ವೆಂಕಟೇಶ್ ಆರೋಪಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿ ಕಾಂಗ್ರೆಸ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದು, ಇತರಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ರವರಿಗೆ ಮತ ನೀಡುವ ಮೂಲಕ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಮನವು ಮಾಡಿದರು
ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸ್ವಾಮಿ, ರಾಮತ್‌ಜಾನ್, ಬಾಬು, ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್, ಮುಖಂಡರಾದ ಆರ್.ಎಸ್.ವಿಜಯಕುಮಾರ್ , ಡಿ.ಎಸ್.ನಂದೀಶ್, ಕುಮಾರ್‌ವಿಜಯ್ ಇತರರಿದ್ದರು.