

ಹುಬ್ಬಳ್ಳಿ: ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಛೇಡಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಪ್ರಕರಣ, ಹೋರಾಟದ ಮೇಲೆ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ವಾಪಸ್ ಪಡೆಯಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿದ್ದವು ಎಂದರು.
ಅಂತೆಯೇ ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ವಾಪಸ್ ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣ ವಾಪಸ್ ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ಮೇಲಿದ್ದ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.