ಬಿಜೆಪಿಗೆ ಗೆಲುವು: ಮಡಿಕೇರಿಯಲ್ಲಿ ವಿಜಯೋತ್ಸವ

9adarshkdga2
Published on

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ತವರು ಗುಜರಾತ್‌ನ ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ದಾರ್ಟಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಮಡಿಕೇರಿ ನಗರ ಮತ್ತು ಮಂಡಲ ಬಿಜೆಪಿಯಿಂದ ವಿಜಯೋತ್ಸವ ನಡೆಯಿತು.


ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.


ಈ ಸಂದರ್ಭ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ಅರುಣ್ ಕುಮಾರ್, ಗುಜರಾತ್‌ನಲ್ಲಿ ಕಾಂಗ್ರೆಸ್ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ, ಗುಜರಾತ್‌ನಲ್ಲಿ ೭ನೇ ಬಾರಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಕರ್ನಾಟಕದಲ್ಲಿಯೂ ಇದೇ ರೀತಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.


ವಿದೇಶಿಗಳ ಷಡ್ಯಂತ್ರಕ್ಕೆ ಬಲಿಯಾಗದಿರಲು ಭಾರತೀಯ ಜನಾತ ಪಕ್ಷ ಒಂದೇ ಕಾರಣ. ಬಿಜೆಪಿ ಮಾತ್ರ ದೇಶವನ್ನು ಉಳಿಸುವ ಕೆಲಸ ಮಾಡುತ್ತದೆ. ಸರ್ವ ಕಾರ್ಯಕರ್ತರು ಗುಜರಾತಿನ ಗೆಲುವಿನಂತೆ ಕರ್ನಾಟಕದಲ್ಲೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಮಡಿಕೇರಿ ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ನಗರಸಭಾ ಸದಸ್ಯರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ, ನಗರಸಭಾ ಸದಸ್ಯ ಶ್ವೇತ ಪ್ರಶಾಂತ್, ಬಿಜೆಪಿ ಉಪಾಧ್ಯಕ್ಷರಾದ ಜಗದೀಶ್, ಜೀವನ್, ರಾಕೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net