ಬಿಜೆಪಿ ಗೆಲುವಿವಾಗಿ ಜನರ ಹಾರೈಕೆ

MDG- votres
ಮೂಡಿಗೆರೆಯಲ್ಲಿ ಬಿಜೆಪಿ-ಜೆಡಿಎಸ್ ಚುನಾವಣಾ ಪ್ರಚಾರ ಕಚೇರಿಯನ್ನು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸಿದರು. ರಂಜನ್ ಅಜಿತ್‌ಕುಮಾರ್ ಇತರರಿದ್ದರು.
Published on

ಮೂಡಿಗೆರೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಮರುಳಾಗದೆ ಕೇಂದ್ರ ಸರ್ಕಾರದ ಯೋಜನೆಗಳ ಮಹತ್ವ ಅರಿತು ಜನತೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಬಿಜೆಪಿ-ಜೆಡಿಎಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಗೆಲುವಿಗಾಗಿ ದೇಶದ ಜನತೆ ಹಾರೈಸುತ್ತಿದ್ದಾರೆ. ದೇಶದಲ್ಲಿ 10 ವರ್ಷದಿಂದ ಬಿಜೆಪಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದೆ. ದೇಶದ ಆಂತರಿಕ ಭದ್ರತೆ ಅತ್ಯುತ್ತಮವಾಗಿದೆ ಎಂದರು.
ಕೇಂದ್ರದಿಂದ ಉಚಿತ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಉಜ್ವಲ ಅಡುಗೆ ಅನಿಲ ಯೋಜನೆಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ. ಇಂಧನ ಬೆಲೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲಾಗಿದೆ. ರಸಗೊಬ್ಬರಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ವ್ಯವಸಾಯ ಪರಿಕರಗಳಿಗೆ ಸಹಾಯ ಧನ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ವಿವಿಧೆಡೆ ರೈಲ್ವೆ ಯೋಜನೆಗೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬರ ಅದಾಯ ಹೆಚ್ಚಿಸಿ ಹಸಿವುಮುಕ್ತ ರಾಷ್ಟ್ರ ಮಾಡುವತ್ತ ಹೆಜ್ಜೆ ಇಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಬಡವರಿಗೆ ಮನೆಗಳನ್ನು ವಿತರಿಸಲಾಗಿದೆ. ಭಯೋತ್ಪಾದಕರನ್ನು ಮಟ್ಟ ಹಾಕಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕ್ರಮವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ ಎಂದು ತಿಳಿಸಿದರು. ರಂಜನ್ ಅಜಿತ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net