ಗ್ರಾಮಾಡಳಿತ ಅಧಿಕಾರಿಗಳಿಂದ ಕಪ್ಪು ಬಟ್ಟೆ ಪ್ರದರ್ಶನ

ANKOLA PROTEST
Published on

ಅಂಕೋಲಾ: ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಬಗೆಹರಿಸುವುದು, ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಸೋಮವಾರ ತಾಲೂಕಿನ ಗ್ರಾಮಾಡಳಿತಾಧಿಕಾರಿಗಳು ಕೈಗೆ ಕಪ್ಪು ಬಟ್ಟೆ ಪ್ರದರ್ಶಿಸಿ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸಿದ್ದಾರೆ.

ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಭಾರ್ಗವ ಎಚ್. ನಾಯಕ ಮಾತನಾಡಿ, ರಾಜ್ಯ ಸಂಘದ ಮಾರ್ಗದರ್ಶನದಲ್ಲಿ ಸಾರ್ವಜನಿಕವಾಗಿ ನಮ್ಮ ಕಚೇರಿಗಳಲ್ಲಿ ನೂರಾರು ಕೆಲಸಗಳನ್ನು ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನೊಳಗೊಂಡಂತೆ ಎಲ್ಲಾ ನೌಕರರಿಗೆ ಒಂದು ತಿಂಗಳ ವೇತನ ಹೆಚ್ಚುವರಿ ಮಾಡಿ ಆದೇಶಿಸಬೇಕು. ತಪ್ಪು ಮಾಹಿತಿ ನೀಡುವ ಅರ್ಜಿದಾರರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ಅದು ಬಿಟ್ಟಿ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ಎಫ್​ಐಆರ್ ಮಾಡುವುದನ್ನು ಕೈಬಿಡಬೇಕು ಎಂದರು.

ಕಾರ್ಯದರ್ಶಿ ಮಂಜು ಮಾರಲಬಾವಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆಸಿಎಸ್​ಆರ್ ನಿಯಮ ತಿಳಿಸಿದಂತೆ ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಕಂದಾಯ ಇಲಾಖೆಯಲ್ಲಿ ಇತರ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ ವರ್ಗಾವಣೆ ಮಾರ್ಗಸೂಚಿ ರಚಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮ ಆಡಳಿತಾಧಿಕಾರಿಗಳಾದ ಸಿ.ಎನ್. ಗುನಗಾ, ಶೈಲೇಶ ನಾಯ್ಕ, ವಿಥುನ್ ಎಚ್.ಬಿ., ಹೇಮಂತಕುಮಾರ, ಯು. ಗಾದಿಲಿಂಗಪ್ಪ, ಲಲತಾ ಆಗೇರ, ಭಾಗ್ಯ ನಾಯ್ಕ, ಮಾನಸಾ ನಾಯಕ, ಸಂಗೀತಾ ಪಿ.ಎ., ಮಂಗಲಾ ಗೌಡ, ಗೌರಮ್ಮ, ಲಕ್ಷ್ಮೀದೇವಿ, ಕಾವ್ಯಾಂಜಲಿ, ಶಿರಿಶಾ, ಶ್ರೀಶೈಲ, ಜ್ಯೋತಿ ನಾಯ್ಕ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net