ಸರ್ಕಾರ ಕೊಡೋ ರಾಗಿನ ಕೋಳಿನೂ ತಿನ್ನಲ್ಲ!

raagi
Published on

ಬೆಂಗಳೂರು: ಸರ್ಕಾರ ಪ್ರತಿ ತಿಂಗಳು ವಿತರಿಸುವ ರಾಗಿ ಕೋಳಿಗಳೂ ಸಹ ತಿನ್ನಲ್ಲವಂತೆ. ಹೀಗೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಆರ್​ ಆರ್​ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದೆ, ಅದರ ಜತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ. ಸರ್ಕಾರ ಕೊಡುತ್ತಿರುವ ರಾಗಿಯನ್ನು ಕೋಳಿ ಕೂಡ ತಿನ್ನಲ್ಲ. ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರ ವಿರುದ್ಧವೂ ಟೀಕಾಪ್ರಹಾರ ನಡೆಸಿದ ಸಿದ್ದರಾಮಯ್ಯ, ಪೊಲೀಸರೇ ಬಿಜೆಪಿ ಸರ್ಕಾರ ಇದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಎಚ್ಚರಿಕೆ ನೀಡಿದರು. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು. ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು.

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಎಂದು ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ ಎಂದ ಸಿದ್ಧರಾಮಯ್ಯ, ಮುನಿರತ್ನ ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net