ಬಿಎಲ್‌ಒಗಳಿಗೆ ಆ್ಯಪ್ ಮಾಹಿತಿ ಅಗತ್ಯ

08-RCR-5
Published on

ರಾಯಚೂರು: ಮತದಾರರ ಪಟ್ಟಿ ತಯಾರಿಕೆಯಿಂದ ಮತದಾರರಿಗೆ ಗುರುತಿನ ಚೀಟಿ ಕೊಡುವವರೆಗೆ ಬಿಎಲ್‌ಒಗಳ ಪಾತ್ರ ಪ್ರಮುಖವಾಗಿದೆ ಎಂದು ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜಿಪಂ ಸಭಾಗಂಣದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಭಾನುವಾರ ಮಾತನಾಡಿದರು. ಈ ಸಲ ಮತಗಟ್ಟೆ ಅಧಿಕಾರಿಗಳಿಗೆ ಉತ್ತಮ ಸೌಲಭ್ಯ ನೀಡಲಾಗುತ್ತಿದ್ದು, ಮಾದರಿ ಮತದಾರರ ಪಟ್ಟಿ ತಯಾರಿಸಬೇಕು ಎಂದರು.

ಬಿಎಲ್‌ಒಗಳು ಚುನಾವಣಾ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಚುನಾವಣೆ ಆ್ಯಪ್ ಬಗ್ಗೆ ಮಾಹಿತಿ ಹೊಂದಿರಬೇಕು. ನಗರಸಭೆ ವ್ಯಾಪ್ತಿಯ ಎಲ್ಲ ಮತದಾನ ಕೇಂದ್ರಗಳಲ್ಲಿ ಕುಡಿವ ನೀರು, ನೆರಳಿನ ವ್ಯವಸ್ಥೆ ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ನಂತರ ಕಡ್ಡಾಯ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net