ಹೃದಯಾಘಾತದಿಂದ ಬಿಎಲ್‌ಒ ಸಾವು

Basavaraj Jagli
Published on

ರಾಯಚೂರು: ಚುನಾವಣೆ ಕರ್ತವ್ಯದಲ್ಲಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನದ ಅರಕೇರಾ ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುವಾಗಿದ್ದ ಬಸವರಾಜ ಜಗ್ಲಿ (53) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಲೋಕಸಭೆ ಚುನಾವಣೆಗೆ ಬಿಎಲ್‌ಒ ಆಗಿ ನೇಮಕಗೊಂಡಿದ್ದ ಬಸವರಾಜ ಮತಗಟ್ಟೆಯಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದಿದ್ದು, ಸಿರವಾರ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net