ಶೀಘ್ರದಲ್ಲಿಯೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ

Block Congress President to be appointed soon
ಮುಧೋಳದಲ್ಲಿ ಆಯೊಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕೆಪಿಸಿಸಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುದಕಣ್ಣ ಅಂಬಿಗೇರ ಇದ್ದಾರೆ.
Published on

ಮುಧೋಳ: ಬಹುದಿನಗಳಿಂದ ಖಾಲಿ ಉಳಿದಿರುವ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆಲವೇ ದಿನದಲ್ಲಿ ಸೂಕ್ತ ಅಭ್ಯರ್ಥಿ ನೇಮಕ ಮಾಡಲಾಗುವುದು ಎಂದು ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.

ಸಾಮಾಜಿಕ ನ್ಯಾಯ ಹಾಗೂ ಕ್ರಿಯಾತ್ಮಕ ಕಾರ್ಯಕರ್ತರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಜಿಲ್ಲೆಯ ಎಲ್ಲ ಬ್ಲಾಕ್‌ಗಳಲ್ಲಿ ಶೀಘ್ರ ಸಭೆ ಕರೆದು ಮುಂಬರುವ ಜಿಪಂ, ತಾಪಂ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಧೋಳ ಹಾಗೂ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದ್ದ ರನ್ನ ವೈಭವವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಜನರ ಭಾವನೆಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಸಚಿವರಿಗೆ ಹಾಗೂ ವೈಭವ ಯಶಸ್ಸಿಗೆ ಸಹಕಾರ ನೀಡಿದ ಸಾರ್ವಜನಿಕರಿಗೆ ಕೆಪಿಸಿಸಿ ಜಿಲ್ಲಾ ಸಮಿತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಜಿಲ್ಲೆಯ ಇನ್ನೊಂದು ಸಾಂಸ್ಕೃತಿಕ ಹಬ್ಬವಾಗಿರುವ ಚಾಲುಕ್ಯ ಉತ್ಸವಕ್ಕೂ ತಯಾರಿ ನಡೆಸುವ ಯೋಜನೆಯಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುದಕಣ್ಣ ಅಂಬಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net