ರಕ್ತದಾನದಿಂದ ಭ್ರಾತೃತ್ವ ವೃದ್ಧಿ, ಗೃಹರಕ್ಷಕ ದಳ ಸಮಾದೇಷ್ಟ ಡಾ.ಚೂಂತಾರು ಅನಿಸಿಕೆ

raktha
ದಕ್ಷಿಣ ಜನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು. ಗೃಹರಕ್ಷಕದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು, ವೈದ್ಯ ಡಾ.ಕಿಶನ್ ರಾವ್ ಬಾಳಿಲ, ತೇಜಸ್ವಿನಿ ಆಸ್ಪತ್ರೆಯ ಡಾ.ವಾಸುದೇವ ಪ್ರಭು, ಉಪಸಮಾದೇಷ್ಟ ರಮೇಶ್ ಮೊದಲಾದವರಿದ್ದರು.
Published on

ಮಂಗಳೂರು: ರಕ್ತದಾನ ಪವಿತ್ರ ಕಾರ್ಯ. ಯಾವುದೇ ಕ್ಷಣದಲ್ಲಿ ಜೀವ ಉಳಿಸಲು ರಕ್ತದ ಅವಶ್ಯಕತೆ ಬರಬಹುದು. ರಕ್ತದಾನ ಮಾಡುವುದರಿಂದ ಭ್ರಾತೃತ್ವ ವೃದ್ಧಿಯಾಗುತ್ತದೆ ಎಂದು ಗೃಹರಕ್ಷಕದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಹೇಳಿದರು.

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆ ವತಿಯಿಂದ ನಗರದ ಮೇರಿಹಿಲ್‌ನಲ್ಲಿರುವ ಗೃಹರಕ್ಷಕದಳ ಕಚೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು.

ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು ಎಂದು ವೈದ್ಯ ಡಾ.ಕಿಶನ್ ರಾವ್ ಬಾಳಿಲ ಹೇಳಿದರು.

ತೇಜಸ್ವಿನಿ ಆಸ್ಪತ್ರೆಯ ಡಾ.ವಾಸುದೇವ ಪ್ರಭು ಅವರು ರಕ್ತದಾನದ ಮಹತ್ವದ ಬಗ್ಗೆ ವಿವರ ನೀಡಿದರು. ಪ್ರತಿ ಆರೋಗ್ಯವಂತ ಪುರುಷ 18 ವರ್ಷದ ಬಳಿಕ 65 ವರ್ಷದವರೆಗೆ ವರ್ಷದ ನಾಲ್ಕು ಬಾರಿ ರಕ್ತದಾನ ಮಾಡಬಹುದು. ದೇಹದಲ್ಲಿ ಹಿಮೋಗ್ಲೋಬಿನ್ ಅಂಶ 12 ಕ್ಕಿಂತ ಜಾಸ್ತಿ ಇದ್ದು ದೇಹದ ತೂಕ 45 ಕೆ.ಜಿ ಗಿಂತ ಜಾಸ್ತಿ ಇರಬೇಕು. ಮಹಿಳೆಯರ ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಬಹುದು ಎಂದರು.

ಉಪಸಮಾದೇಷ್ಟ ರಮೇಶ್, ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ಮೀನಾಕ್ಷಿ, ಉಳ್ಳಾಲ ಘಟಕದ ಘಟಕಾಧಿಕಾರಿ ಭಾಸ್ಕರ್ ಎಂ, ಸುರತ್ಕಲ್ ಘಟಕದ ಘಟಕಾಧಿಕಾರಿ ರಮೇಶ್, ಮಂಗಳೂರು ಘಟಕದ ಸಾರ್ಜೆಂಟ್ ಸುನಿಲ್, ಗೃಹರಕ್ಷಕರಾದ ಕನಕಪ್ಪ, ದಿವಾಕರ್, ರಂಗಪ್ಪ, ರಂಜಿತ್, ಪ್ರಸಾದ್, ನಿಖಿಲ್, ಸುಲೋಚನಾ, ಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.

ತೇಜಸ್ವಿನಿ ಆಸ್ಪತ್ರೆ ತಂತ್ರಜ್ಞರು ಈ ಶಿಬಿರ ನಡೆಸಿಕೊಟ್ಟರು. ಸುಮಾರು 15 ಮಂದಿ ಗೃಹರಕ್ಷಕರು ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net