

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್, ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್, ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ,ರೋವರ್ಸ್-ರೇಂಜರ್ಸ್ ಘಟಕ, ಯೂತ್ ರೆಡ್ ಕ್ರಾಸ್ ಘಟಕ, ಹಳೇ ವಿದ್ಯಾರ್ಥಿ ಸಂಘ, ಆಂತರಿಕ ಗುಣಮಟ್ಟ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.
ಪುತ್ತೂರು ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ಸೀತಾರಾಮ ಭಟ್ ಉದ್ಘಾಟಿಸಿದರು. ಪ್ರಭಾರ ಪ್ರಾಂಶುಪಾಲ ದಿನೇಶ್ ಕೆ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಗಣೇಶ್ ಪ್ರಸಾದ್, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಭಾಗವಹಿಸಿದ್ದರು. ಉಪನ್ಯಾಸಕರಾದ ಮನೋಹರ್, ಲತಾ ಬಿ.ಟಿ., ಆರತಿ, ಪ್ರಮೀಳಾ, ಸ್ವಾತಿ, ವನಿತಾ, ಅಶ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದೀಕ್ಷಾ ನಿರೂಪಿಸಿದರು. ರಾಮಪ್ರಸಾದ್ ಸ್ವಾಗತಿಸಿದರು. ಉಪನ್ಯಾಸಕ ಸೃಜನ್ ಮಂಡೋಡಿ ವಂದಿಸಿದರು.