ಮೇಕೇರಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

13mdk03
Published on

ಮಡಿಕೇರಿ:
ಮೇಕೇರಿಯ ಸ್ವಾಗತ ಯುವಕ ಸಂಘದ ಆಶ್ರಯದಲ್ಲಿ ಸಾಮಾಜಿಕ ನ್ಯಾಯ ದಿನದ ಪ್ರಯುಕ್ತ ೧೦ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇತ್ತೀಚೆಗೆ ಮೇಕೇರಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಕಾರ್ಯಕ್ರಮ ಉದ್ಘಾಟಿಸಿ ಸ್ವಾಗತ ಯುವಕ ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ ಸುಕುಮಾರ್ ರಕ್ತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಘಟಕದ ಡಾ ಕರುಂಬಯ್ಯ ಮಾತನಾಡಿದರು. ಮೇಕೇರಿಯ ಡಾ ಸಭಾಶ್ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.


ರಕ್ತದಾನ ಶಿಬಿರದಲ್ಲಿ ೪೦ಕ್ಕೂ ಅಧಿಕ ಮಂದಿ ಯುವಕರು ಮಹಿಳೆಯರಾದಿಯಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ಇದೇ ಸಂದರ್ಭ ಹೆಚ್.ಐ.ವಿ ಏಡ್ಸ್ ಸೋಂಕು ಬಗೆಗಿನ ಜಾಗೃತಿ ಕುರಿತು ಸುನಿತಾ ಮುತ್ತಣ್ಣ ಮಾತನಾಡಿದರು.

ನೆಹರು ಯುವಕೇಂದ್ರ ಮಡಿಕೇರಿ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ ಕೊಡಗು, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕಾರ್ಮಿಕ ಇಲಾಖೆ ಮಡಿಕೇರಿ ಮತ್ತಿತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ ಮೇಕೇರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ಸಬಿತಾ, ಎಸ್‌ಡಿಎಂಸಿ ಪದಾಧಿಕಾರಿಗಳು, ಮೇಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಪಿಡಿಒ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net