ಅಸಹಾಯಕರ ಏಳಿಗೆಗೆ ಸಮಯ ಮೀಸಲು - ಸಂಜೀವ ಮಠಂದೂರು ಹೇಳಿಕೆ - ಮೋದಿ ಹುಟ್ಟುಹಬ್ಬದಂಗವಾಗಿ ರಕ್ತದಾನ

oppo_2
oppo_2
Published on

ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ಯುವ ಮೋರ್ಚಾದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನಾಚಣೆ ಮತ್ತು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ನಡೆಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಬಿಜೆಪಿ ೧೫ ದಿವಸ ನಿರಂತರವಾಗಿ ಸೇವಾ ಪಾಕ್ಷಿಕ ಆಚರಣೆಯನ್ನು ಮಾಡುತ್ತಾ ಬಿಜೆಪಿ ಕಾರ್ಯಕರ್ತರು ದೇಶದಲ್ಲಿ ಶೋಷಿತ, ಪೀಡಿತ, ಅಮಾಯಕ, ಅಸಹಾಯಕ, ದಲಿತ ಜನಾಂಗದ ಏಳಿಗೆಗಾಗಿ ಪ್ರತಿ ದಿನದ ಸಮಯವನ್ನು ಮೀಸಲಿಡಬೇಕಾಗಿದೆ ಎಂದರು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ, ಶ್ರೇಷ್ಠವಾದ ರಕ್ತದಾನದ ಮೂಲಕ ಜನರ ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ ಬಿಜೆಪಿಯ ಕಾರ್ಯಕರ್ತರ ಪಾತ್ರ ಬಹಳ ಅಮೂಲ್ಯವಾಗಿದೆ ಎಂದರು.
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸೇವಾ ಪಾಕ್ಷಿಕದ ಜಿಲ್ಲಾ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಿಶಿರ್ ಪೆರುವೋಡಿ, ಪ್ರಧಾನ ಕಾರ್ಯದರ್ಶಿಗಳಾದ ಆದೀಶ್ ಶೆಟ್ಟಿ, ಅಜಿತ್ ಮಾಣಿಲ, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೇಗ, ಪ್ರಧಾನ ಕಾರ್ಯದರ್ಶಿಗಳಾದ ದಯಾರಾಜ್, ಚಿಂತನ್, ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net