ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಸಂಶಿ ಅರ್ಬನ್ ಕೋಆಪ್ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ನಿಮಿತ್ತ ಕೇಂದ್ರ ಕಚೇರಿಯ ನವೀಕೃತ ಕೌಂಟರ್, ಸಭಾಭವನ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ಜೂನ್ 17ರಂದು ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ.
ಗ್ರಾಹಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ರಕ್ತದಾನ ಮಾಡುವ ದಾನಿಗಳು ಹೆಸರು ನೋಂದಾಯಿಸಬೇಕೆಂದು ಪ್ರಕಟಣೆ ಕೋರಿದೆ.