

ವಿಜಯವಾಣಿ ಸುದ್ದಿಜಾಲ ಸುಳ್ಯ
ರೋಟರಿ ಕ್ಲಬ್ ಸುಳ್ಯ ಸಿಟಿ ನೇತೃತ್ವದಲ್ಲಿ ರೋಟರಿ ಕ್ಲಬ್ ಸುಳ್ಯ, ರೋಟರ‌್ಯಾಕ್ಟ್ ಕ್ಲಬ್ ಸುಳ್ಯ ಯುನೈಟೆಡ್, ಪಯಸ್ವಿನಿ ಯುವಕ ಮಂಡಲ ಕೇರ್ಪಳ, ಶ್ರೀ ಭಗವತಿ ಯುವ ಸೇವಾ ಸಂಘ ಬೂಡು ಕೇರ್ಪಳ ಕುರುಂಜಿಗುಡ್ಡೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಸುಳ್ಯ ರೋಟರಿ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ಮಾತನಾಡಿ, ರಕ್ತದಾನ ಎಲ್ಲರೂ ಮಾಡಬಹುದು. ಭಯ ಪಡುವ ಅಗತ್ಯ ಇಲ್ಲ. ಅದರಷ್ಟು ಶ್ರೇಷ್ಠ ಕಾರ್ಯ ಇನ್ನೊಂದಿಲ್ಲ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಸಿ.ಎ. ಗಣೇಶ್ ಭಟ್, ರೋಟರ‌್ಯಾಕ್ಟ್ ಸುಳ್ಯ ಯುನೈಟೆಡ್ ಅಧ್ಯಕ್ಷ ರೇಮಂಡ್ ಹಾವರ್ಡ್, ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ಕೇರ್ಪಳ, ಶ್ರೀ ಭಗವತಿ ಯುವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ನಡುಬೈಲು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ರಕ್ತದಾನ ಶಿಬಿರ ನಡೆಯಿತು.