

ಮಂಗಳೂರು : ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಕಂಕನಾಡಿ ಪಡೀಲ್, ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಭಾಗಿತ್ವದಲ್ಲಿ ಅ.2ರಂದು ಬೆಳಗ್ಗೆ 9.30ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ರಥಬೀದಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಶಿಬಿರ ಉದ್ಘಾಟಿಸಲಿದ್ದಾರೆ. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ , ಲಯನ್ಸ್ ಕ್ಲಬ್ ಅಧ್ಯಕ್ಷ ಕರುಣಾಕರ ಎಂ ಎಚ್ , ಲಿಯೋ ಕ್ಲಬ್ ಅಧ್ಯಕ್ಷ ಕವನ್ ಸುವರ್ಣ, ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಕ್ಷೆ ಅಕ್ಷತಾ ಕದ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.