ಜು.೨೫ ರಂದು ಪಾಲಿಬೆಟ್ಟದಲ್ಲಿ ರಕ್ತದಾನ

321159052_191431026881651_2861282683719647674_n
Published on

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.೨೫ ರಂದು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಪತ್ರಕರ್ತರು ಸೇರಿದ್ದಂತೆ ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.

ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ರಕ್ತಧಾನ ಮಾಡುವವರು ಜುಲೈ ೨೦ ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತಮ್ಮ ಹೆಸರನ್ನ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ. ಅರುಣ್ ಕುಮಾರ್ (೯೪೪೮೩೩೧೨೨೯) ಅವರಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net