ವಿದ್ಯಾರ್ಥಿಗಳಿಂದ ರಕ್ತದಾನ ಇತರರಿಗೆ ಮಾದರಿ

SVR RAKTADANA
Published on

ಸವಣೂರ: ವಿದ್ಯಾರ್ಥಿ ಜೀವನದಲ್ಲಿ ರಕ್ತದಾನದೊಂದಿಗೆ ಸಾಮಾಜಿಕ ಚಿಂತನೆಗೆ ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದು ಕೆಜಿಸಿಟಿಎ ಅಧ್ಯಕ್ಷ, ಪ್ರಾಧ್ಯಾಪಕ ಡಾ. ಮೋತಿಲಾಲ ರಾಠೋಡ ಹೇಳಿದರು.

ಪಟ್ಟಣದ ಶ್ರೀಮತಿ ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಜಿಲ್ಲಾ ರಕ್ತನಿಧಿ ಕೇಂದ್ರದ, ಯುತ್ ರೆಡ್​ಕ್ರಾಸ್ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ರಕ್ತ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಣ ಪಡೆದು ಉನ್ನತ ಸಾಧನೆಗೆ ಮುಂದಾಗಲು ಶೈಕ್ಷಣಿಕ ಹಂತದಲ್ಲಿ ವಿವಿಧ ಸಾಮಾಜಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು. ಕಾಲೇಜ್​ನಲ್ಲಿ ರಕ್ತದಾನ ಶಿಬಿರ ಏರ್ಪಡಿಸಿ, ರಕ್ತದಾನಕ್ಕೆ ಮುಂದಾಗಿರುವ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ಶಿಬಿರದ ನೇತೃತ್ವ ವಹಿಸಿದ್ದ ಡಾ. ಎಂ.ಎಚ್. ಹೆಬ್ಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ ಮಾತನಾಡಿ, ರಾಷ್ಟ್ರ ರಕ್ಷಣೆಗಾಗಿ ಯೋಧರು ಬಲಿದಾನಗೈಯುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಕ್ತದಾನದೊಂದಿಗೆ ಉತ್ತಮ ರಾಷ್ಟ್ರ ನಿರ್ವಣಕ್ಕೆ ಭದ್ರ ಬುನಾದಿ ಹಾಕುತ್ತಿರುವುದು ಸಂತಸ ತಂದಿದೆ ಎಂದರು.

ಪ್ರಾಚಾರ್ಯ ಡಾ. ಪ್ರವೀಣಮಹಾಬಲೇಶ್ವರ ಆನಂದಕಂದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸೇರಿ ಒಟ್ಟು 31 ಯುವಕರು ರಕ್ತದಾನ ಮಾಡಿದರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತ ತಪಾಸಣೆಗೆ ಒಳಗಾದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ. ನಟರಾಜ ಎಸ್.ಬಿ., ಜಿಲ್ಲಾ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞ ಬಸವರಾಜ ಕಮತದ, ಸವಣೂರ ರಕ್ತನಿಧಿ ಕೇಂದ್ರದ ತಂತ್ರಜ್ಞ ಮಹಾಂತೇಶ ಹೊಳೆಯಮ್ಮನವರ ಇತರರಿದ್ದರು. ಪ್ರೋ. ದಿವ್ಯಶ್ರೀ ಬಿ.ಎನ್., ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net