

ಗಂಗೊಳ್ಳಿ: ತಲ್ಲೂರು ಸಪ್ತಸ್ವರ ವಿವಿಧೊದ್ದೇಶ ಸಹಕಾರ ಸಂಘ, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ , ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ ತಲ್ಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ರಕ್ತದಾನ ಶಿಬಿರವನ್ನು ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಉದ್ಘಾಟಿಸಿದರು.
ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಅಧ್ಯಕ್ಷ ಶಂಕರ್ ಸೇರುಗಾರ್ ಅಧ್ಯಕ್ಷತೆ ವಹಿಸಿದರು. ಡಾ.ಆದರ್ಶ್ ಹೆಬ್ಬಾರ್, ಡಾ ಎಚ್.ಅಶೋಕ್, ಮನೋಜ್ ಕುಮಾರ್, ಗಿರೀಶ್ ಎಸ್. ನಾಯ್ಕ, ಡಾ.ದೀಕ್ಷಾ, ಸತೀಶ್ ಸಾಲ್ಯಾನ್ ಮಣಿಪಾಲ್, ಪ್ರಶಾಂತ್ ತಲ್ಲೂರು ಉಪಸ್ಥಿತರಿದ್ದರು. ಒಟ್ಟು 103 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.