ಶ್ರೀ ಮಹದೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

14-KGLPHOTO-2,
Published on

ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಶ್ರೀ ಮಹದೇಶ್ವರ ಪ್ರಥಮ ಕಾಲೇಜು, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರಕ್ಕೆ ಚಾಲನೆ ನೀಡಿದ ಶ್ರೀ ಮಹದೇಶ್ವರ ಕಾಲೇಜಿನ ಪ್ರಾಂಶುಪಾಲೆ ಜಯಲಕ್ಷ್ಮೀ ಮಾತನಾಡಿ, ರಕ್ತದಾನ ಶ್ರೇಷ್ಠದಾನ. ರಕ್ತದಾನದಿಂದ ರೋಗಿಯೊಬ್ಬನ ಪ್ರಾಣ ಉಳಿಸಿದ ಪುಣ್ಯ ಸಿಗಲಿದೆ. ರಕ್ತದಾನದಿಂದ ಆರೋಗ್ಯ ವೃದ್ಧಿಸಲಿದೆ ಎಂದರು. ಶಿಬಿರದಲ್ಲಿ ಸುಮಾರು 35 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸುಂದರಮೂರ್ತಿ, ಡಾ.ಪ್ರೇಮಾಕುಮಾರಿ, ಪ್ರೇಮಲತಾ, ಡಾ.ವೇಣುಗೋಪಾಲ್, ಪ್ರಕಾಶ್, ಪರಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ಜಯಶಂಕರ್, ಚಾಮರಾಜನಗರ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ.ಎಂ.ಮಹೇಶ್, ಮಾದೇಶ್, ಡಯಾನಾ, ಸರಸ್ವತಿ, ಪ್ರಯೋಗ ಶಾಲಾ ತಜ್ಞ ಸತ್ಯ, ರವಿಕಿರಣ್, ಜಿಲ್ಲಾ ರಕ್ತ ನಿಧಿ ಕೇಂದ್ರದ ಆಪ್ತ ಸಮಾಲೋಚಕ ಮಹದೇವಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net