

ಕುಂದಾಪುರ: ಪ್ರಮೋದ್ ಮಧ್ವರಾಜ್‌ರವರು ಎಲ್ಲರನ್ನೂ ಪ್ರೀತಿಸುತ್ತಾ ಬೆಳೆದವರು. ನಂಬಲರ್ಹ ರಾಜಕಾರಣಿಯಾಗಿ ಜೀವನ ಸವೆಸಿದವರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹೊಸ ಬಸ್ ನಿಲ್ದಾಣದ ಹತ್ತಿರದ ಫೆರಿ ರಸ್ತೆಯ ರೋಟರಿ ಭವನದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಸರ್ಕಾರಿ ಆಸ್ಪತ್ರೆ ಫಿಸಿಶಿಯನ್ ಡಾ.ನಾಗೇಶ್, ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಎಸ್., ಅಭಯ ಹಸ್ತ ಚಾರಿಟೆಬಲ್ ಟ್ರಸ್ಟ್‌ನ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಅಧ್ಯಕ್ಷ ರೋವನ್ ಡಿಕೋಸ್ತಾ, ಯುವ ಬಂಟರ ಸಂಘ ಮಾಜಿ ಅಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ತಾಪಂ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಹೇರಿಕುದ್ರು, ಮೊಗವೀರ ಯುವ ಸಂಘಟನೆ ಮಾಜಿ ಜಿಲ್ಲಾ ಅಧ್ಯಕ್ಷ ಸದಾನಂದ ಬಳ್ಕೂರು ಉಪಸ್ಥಿತರಿದ್ದರು.
ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ, ಉಡುಪಿ ಅಭಯಹಸ್ತ ಚಾರಿಟೆಬಲ್ ಟ್ರಸ್ಟ್, ಕುಂದಾಪುರ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಹಯೋಗ ನೀಡಿದ್ದವು. ನಾಗರಾಜ್ ಸಂಜನಾ ಭಟ್ಕಳ ನಿರ್ವಹಿಸಿದರು. ರಕ್ತದಾನಿಗಳಾದ ಪ್ರಶಾಂತ್ ತಲ್ಲೂರು, ಶರಣ್ ಸಂದೀಪ್ ಕೋಡಿ, ವಿಜಯ್ ಎಸ್.ಪೂಜಾರಿ ಕುಂದಾಪುರ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಚೇತನ ಕಲಾವಿದ ಗಣೇಶ ಪಂಜಿಮಾರು ರಚಿಸಿದ ಭಾವಚಿತ್ರವನ್ನು ಪ್ರಮೋದ್ ಅವರಿಗೆ ನೀಡಲಾಯಿತು. ಗಣೇಶ್ ಅವರನ್ನು ಗೌರವಿಸಲಾಯಿತು.